ಕೆ.ಎನ್.ಪಿ.ವಾರ್ತೆ,ದಾವಣಗೆರೆ,ನ.21;

ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದು ಪತ್ರಕರ್ತ ಸಾವನ್ನಪ್ಪಿದ ಘಟನೆ ಕೊಡಗನೂರಿನ ಬಳಿ ನಡೆದಿದೆ.

ಹಾವೇರಿ ಜಿಲ್ಲೆಯ ಪ್ರಜಾವಾಣಿ ವರದಿಗಾರ ಮಂಜುನಾಥ್ (30) ಮೃತ ಪತ್ರಕರ್ತ. ಶಿವಮೊಗ್ಗ ಮೂಲದ ಯುವ ಪತ್ರಕರ್ತ ಮಂಜುನಾಥ ದಾವಣಗೆರೆ ಜಿಲ್ಲೆಯ ಮಾಯಕೊಂಡ ಸಮೀಪದ ಕೊಡಗನೂರು ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಶಿವಮೊಗ್ಗ ನಗರದವರಾದ ಮಂಜುನಾಥ ಅವರು 5 ತಿಂಗಳ ಹಿಂದಷ್ಟೇ ಹಾವೇರಿ ಜಿಲ್ಲೆಗೆ ವರ್ಗಾವಣೆಗೊಂಡಿದ್ದರು.

ಹೊಳಲ್ಕೆರೆಯಲ್ಲಿರುವ ಅಕ್ಕನ ಮನೆಗೆ ಹಾವೇರಿಯಿಂದ ಬೈಕ್ ನಲ್ಲಿ ಹೋಗುತ್ತಿದ್ದಾಗ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಟ್ರಾಕ್ಟರ್ ಸಮೇತ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ.

ಪತ್ರಕರ್ತ ಮಂಜುನಾಥ ಅವರ ಶವವನ್ನು ಆ್ಯಪೆ ಆಟೋದಲ್ಲಿ ಜಿಲ್ಲಾಸ್ಪತ್ರೆಗ ರವಾನೆ ಮಾಡಲಾಗಿದ್ದು, ಈ ಕುರಿತು ಸ್ಥಳೀಯ ಪತ್ರಕರ್ತರು ಖಂಡನೆ ವ್ಯಕ್ತ ಪಡಿಸಿದ್ದಾರೆ. ಇಂದು ಪ್ರತಿಭಟನೆ ನಡೆಸಲು ನಿರ್ಧರಿಸಿರುವ ಪತ್ರಕರ್ತರು ಆ್ಯಂಬುಲೆನ್ಸ್‌ ಕಳುಹಿಸದಿರುವ ಬಗ್ಗೆ ಭಾರಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಶವವನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಅಂತ್ಯಸಂಸ್ಕಾರ ಗುರುವಾರ ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.