ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.23;

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ವಿಚಾರವಾಗಿ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ತೀವ್ರ ಮುಖಭಂಗವಾಗಿದೆ. ಯೂನಿಸೆಫ್ ನ ಸೌಹಾರ್ದಯುತ ರಾಯಭಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರಿಯಾಂಕಾ ಚೋಪ್ರಾ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಪಾಕಿಸ್ತಾನದ ಮಾನವ ಹಕ್ಕುಗಳ ಸಚಿವ ಶರೀನ್ ಮಾಝಾರಿ ವಿಶ್ವಸಂಸ್ಥೆಗೆ ದೂರು ನೀಡಿದ್ದರು.

ಈ ದೂರಿಗೆ ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆಯ ವಕ್ತಾರ, ಪ್ರಿಯಾಂಕಾ ಚೋಪ್ರಾ ಅವರಿಗೆ ತಮ್ಮ ವೈಯಕ್ತಿಕ ವಿಚಾರಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ ಎಂದು ಹೇಳುವ ಮೂಲಕ ಪಾಕಿಸ್ತಾನದ ಮನವಿಯನ್ನು ತಿರಸ್ಕರಿಸಿದೆ.

ತಾವು ಆಸಕ್ತಿ ಹೊಂದಿರುವ ಹಾಗೂ ಕಾಳಜಿ ಹೊಂದಿರುವ ವಿಷಯಗಳ ಬಗ್ಗೆ ಸ್ವಂತ ಸಾಮರ್ಥ್ಯದಲ್ಲಿ ಮಾತನಾಡುವ ಹಕ್ಕು ಹೊಂದಿದ್ದಾರೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯಾ ಗುಟರೆಸ್ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿದ್ದಾರೆ.

http://karnatakanewsportal.com/bollywood-nati-priyankachopra-virudda-vishvasamstege-dooru/

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.