ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.28;

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ, ಎಡಪಕ್ಷಗಳು ಜನವರಿ 8, 2020ರಂದು (ಬುಧವಾರ) ಭಾರತ್ ಬಂದ್ ಗೆ ಕರೆ ನೀಡಿವೆ.

ಇದಕ್ಕೂ ಮುನ್ನ, “ಜನವರಿ ಒಂದರಿಂದ ಏಳರವರೆಗೆ ಜನಜಾಗೃತಿ ಆಂದೋಲನ ನಡೆಸಲು ನಿರ್ಧರಿಸಲಾಗಿದೆ” ಎಂದು ಸಿಪಿಐ ಮುಖಂಡರು ಹೇಳಿದ್ದಾರೆ.

“ಪೌರತ್ವ ತಿದ್ದುಪಡಿ, NRC ಮತ್ತು ಕೇಂದ್ರ ಸರಕಾರದ ಧೋರಣೆಯ ವಿರುದ್ದ ಭಾರತ್ ಬಂದ್ ಗೆ ಕರೆನೀಡಲಾಗಿದೆ” ಎಂದು ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಡಿ.ರಾಜಾ ತಿಳಿಸಿದ್ದಾರೆ.

ಬೆಲೆ ಏರಿಕೆ, ರೂಪಾಯಿ ಮೌಲ್ಯ ಕುಸಿತ, ನಿರುದ್ಯೋಗ ಮುಂತಾದ ಸಮಸ್ಯೆಗಳು ತಾಂಡವಾಡುತ್ತಿದೆ. ಇದರಿಂದ ಜನರ ಗಮನವನ್ನು ಬೇರೆ ಕಡೆ ಸೆಳೆಯಲು, ಪೌರತ್ವ ಮಸೂದೆಯನ್ನು ಕೇಂದ್ರ ಸರಕಾರ ಜಾರಿಗೆ ತರಲು ಮುಂದಾಗಿದೆ” ಎಂದು ರಾಜಾ ದೂರಿದ್ದಾರೆ.

“ಭಾರತ್ ಬಂದ್ ಸಂಬಂಧದ ರೂಪುರೇಷೆಗಳ ಬಗ್ಗೆ ಮುಂದಿನ ಕೆಲವು ದಿನಗಳಲ್ಲಿ ವಿವರಣೆ ನೀಡಲಾಗುವುದು. ಬಿಜೆಪಿ ಮತ್ತು ಸಂಘ ಪರಿವಾರವೇ ಈ ದೇಶದ ತುಕ್ಡೆತುಕ್ಡೆ ಗ್ಯಾಂಗ್” ಎಂದು ರಾಜಾ ಹೇಳಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.