ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.12;
ಪ್ರೌಢಶಾಲೆಗಳಿಗೆ ಅಚ್ಚು ಮೆಚ್ಚಿನ ಪುಸ್ತಕ / ರಸಪ್ರಶ್ನೆ ಕಾರ್ಯಕ್ರಮ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ರಾಜ್ಯದಾದ್ಯಂತ ಪ್ರೌಢಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಅಥವಾ ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸುವ ಕುರಿತು ಯೋಜನೆಯನ್ನು ಹಮ್ಮಿಕೊಂಡಿದೆ.
ಈ ಯೋಜನೆಯಡಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳು ತಮ್ಮ ತಮ್ಮ ಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಹಾಗೂ ರಸಪ್ರಶ್ನೆಯ ಒಂದು ಕಾರ್ಯಕ್ರಮ ಏರ್ಪಡಿಸಬಹುದಾಗಿದೆ.
ಈ ಕಾರ್ಯಕ್ರಮವನ್ನು ನಡೆಸುವ ಸಲುವಾಗಿ ಪ್ರಾಧಿಕಾರವು ರೂ.5000 ಗಳ ಗರಿಷ್ಟ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸುವುದು. ತಮ್ಮ ಶಾಲಾ ವಿವರಗಳೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಬಹುದಾದ ದಿನಾಂಕ, ಆಹ್ವಾನಿಸುವ ಇಬ್ಬರು ತೀರ್ಪುಗಾರರ ಹೆಸರು ಇತ್ಯಾದಿ ವಿವರಗಳೊಂದಿಗೆ ಆಯಾ ಶಾಲಾ ಮುಖ್ಯಸ್ಥರು ಸ್ವಯಂ ಅರ್ಜಿ ಸಲ್ಲಿಸಲು ಜೂ.30 ಕೊನೆಯ ದಿನವಾಗಿದೆ. ಕಾರ್ಯಕ್ರಮದ ಮುನ್ನ ಪ್ರಾಧಿಕಾರದಿಂದ ಪೂರ್ವಾನುಮೋದನೆ ಪಡೆಯುವುದು ಕಡ್ಡಾಯ.
ವಿಳಾಸ : ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002
ವೆಬ್ ಸೈಟ್ : www.kannadapustakapradhikara@gmail.com
ದೂರವಾಣಿ ಸಂಖ್ಯೆ : 080-22484516 / 22107704
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
9513326661
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.