ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.09;

ರಾಜ್ಯಾದ್ಯಂತ ಸುಮಾರು 44 ಲಕ್ಷ ರೈತರ 40 ಸಾವಿರ ಕೋಟಿ ರೂಪಾಯಿ ಬೆಳೆಸಾಲ ಮನ್ನಾ ಕಾರ್ಯಕ್ರಮಕ್ಕೆ ನಿನ್ನೆ ಅಧಿಕೃತವಾಗಿ ಚಾಲನೆ ದೊರೆಯಿತು.

ದೊಡ್ಡಬಳ್ಳಾಪುರದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಸಾಲಮನ್ನಾಕ್ಕೆ ಚಾಲನೆ ನೀಡಿದರು. ಸಮಾರಂಭದಲ್ಲಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಲಾಯಿತು.

ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ‘ಕಳೆದ 3-4 ವರ್ಷಗಳಿಂದ ಬರದ ದವಡೆಗೆ ಸಿಲುಕಿದ್ದ ರೈತರ ಸಾಲ ಮನ್ನಾ ಮಾಡಲು ಒತ್ತಾಯ ಬಂದ ಹಿನ್ನೆಲೆಯಲ್ಲಿ ಹಾಗೂ ರೈತರ ಸಂಕಷ್ಟಗಳನ್ನು ಅರಿತ ಮೈತ್ರಿ ಸರ್ಕಾರ ಸಾಲ ಮನ್ನಾದಂಥ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಅಪನಂಬಿಕೆ ಹುಟ್ಟಿಸಿದವರಿಗೆ ದಿಟ್ಟ ಉತ್ತರ ನೀಡಿದೆ’ ಎಂದು ಹೇಳಿದರು.

‘ರೈತರಿಗೆ ಉತ್ತಮ ಮತ್ತು ನೆಮ್ಮದಿಯ ಬದುಕು ನಡೆಸಲು ರಾಜ್ಯ ಸರ್ಕಾರ ಎಲ್ಲ ಸಹಕಾರ ನೀಡಲಿದೆ. ರಾಷ್ಟ್ರೀಕೃತ ಮತ್ತು ವಾಣಿಜ್ಯ ಬ್ಯಾಂಕುಗಳ ರೈತರ ಸಾಲ ಮನ್ನಾ ಮಾಡಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ರಾಷ್ಟ್ರದಲ್ಲಿಯೇ ಇದೊಂದು ಐತಿಹಾಸಿಕ ನಿರ್ಧಾರ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಈ ವೇಳೆ ಕೃಷಿ ಸಚಿವ ಎನ್. ಎಚ್. ಶಿವಶಂಕರರೆಡ್ಡಿ ಮಾತನಾಡಿ, ಸರ್ಕಾರ ರೈತರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸುತ್ತಿರುವುದಲ್ಲದೆ ಹಲವಾರು ಸಕಾರಾತ್ಮಕ ಯೋಜನೆಗಳನ್ನು ಹಮ್ಮಿಕೊಂಡಿದೆ. ಮೊದಲ ಬಾರಿಗೆ ರೈತಪರ ಕಾರ್ಯಕ್ರಮ ರೂಪಿಸಲು ರೈತರ ಸಲಹೆಗಳನ್ನು ಪಡೆಯಲು ರೈತ ಸಲಹಾ ಸಮಿತಿ ರಚಿಸಲಾಗಿದೆ. ಅದರಂತೆಯೇ ರೈತರಿಗೆ ಪೂರಕವಾದ ಕಾರ್ಯಕ್ರಮ ರೂಪಿಸುತ್ತೇವೆ ಎಂದು ನುಡಿದರು.

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ಡಿ, ಸಂಸದ ಎಂ. ವೀರಪ್ಪ ಮೊಯ್ಲಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.