ಕೆ.ಎನ್.ಪಿ.ವಾರ್ತೆ,ನವದೆಹಲಿ,ಜೂ.04;
ಕರ್ನಾಟಕದ ಒಳನಾಡು ಮತ್ತು ಆಂಧ್ರಪ್ರದೇಶದ ಕರಾವಳಿ, ತಮಿಳುನಾಡು ಸೇರಿದಂತೆ ರಾಷ್ಟ್ರದ ಹಲವು ರಾಜ್ಯಗಳಲ್ಲಿ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಚಂಡಮಾರುತ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪಶ್ಚಿಮ ಬಂಗಾಳ, ಒಡಿಶಾ, ಜಾರ್ಖಂಡ್, ಬಿಹಾರ, ಉತ್ತರಪ್ರದೇಶ, ಉತ್ತರಾಖಂಡ, ಛತ್ತೀಸಘಡ, ಗೋವಾ, ಮಧ್ಯ ಮಹಾರಾಷ್ಟ್ರ, ತೆಲಂಗಾಣ ರಾಜ್ಯಗಳ ವಿವಿಧ ಸ್ಥಳಗಳಲ್ಲಿ ತೀವ್ರ ಗಾಳಿ ಮತ್ತು ಗುಡುಗು ಮಿಂಚು ಸಹಿತ ಚಂಡಮಾರುತ ಬೀಸಲಿದ್ದು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ತೆಲಂಗಾಣ, ರಾಯಲಸೀಮಾ, ಆಂಧ್ರಪ್ರದೇಶದ ಕರಾವಳಿ ಮತ್ತು ಕೇರಳ ಹಲವು ಸ್ಥಳಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಇಲಾಖೆ ಇಂದು ಮುನ್ನೆಚ್ಚರಿಕೆ ನೀಡಿದೆ.
ಇಂದು ರಾಜ್ಯದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಸಂಭವವಿದೆ. ಉಳಿದಂತೆ ಬಹುತೇಕ ಜಿಲ್ಲೆಗಳ ಹಲವೆಡೆ ಗುಡುಗಿನಿಂದ ಕೂಡಿದ ಮಳೆ ಬೀಳಲಿದ್ದು, ನಾಳೆ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಬುಧವಾರ ಕರಾವಳಿ ಜಿಲ್ಲೆ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಕೃಪೆ : ಆನ್ ಲೈನ್
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
9513326661
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.