ಕೆ.ಎನ್.ಪಿ.ವಾರ್ತೆ,ಜೈಪುರ,ಆ.13;

ಮಾಜಿ ಪ್ರಧಾನಿ, ಹಿರಿಯ ಕಾಂಗ್ರೆಸ್ ಮುಖಂಡ ಮನಮೋಹನ್ ಸಿಂಗ್ ಮತ್ತೊಂದು ಅವಧಿಗೆ ರಾಜ್ಯಸಭೆಗೆ ಆಯ್ಕೆ ಬಯಸಿ ರಾಜಸ್ಥಾನದಿಂದ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಮತ್ತು ಪಕ್ಷದ ಇತರ ಹಿರಿಯ ನಾಯಕರು ಹಾಜರಿದ್ದರು.

ಕಳದೆ ಜೂನ್‌ನಲ್ಲಿ ಬಿಜೆಪಿಯ ಮದನ್ ಲಾಲ್ ಸೈನಿ ಸಾವನ್ನಪ್ಪಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. 

1991ರಲ್ಲಿ ಅಸ್ಸಾಂನಿಂದ ಚುನಾಯಿತರಾದ ನಂತರ ಆಗಿನ ಪ್ರಧಾನಿ ಪಿ.ವಿ.ನರಸಿಂಹ ರಾವ್ ಅವರು ಆರ್ಥಿಕ ಪರಿಸ್ಥಿತಿ ಸುಧಾರಿಸಲು ಡಾ.ಮನಮೋಹನ್ ಸಿಂಗ್ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡು ಅವರಿಗೆ ಹೊಣೆಗಾರಿಕೆ ನೀಡಿದ್ದರು. ಅವರು ನಾಲ್ಕು ಅವಧಿಗೆ ರಾಜ್ಯಸಭೆ ಸದಸ್ಯರಾಗಿ, ಎರಡು ಬಾರಿ ಪ್ರಧಾನ ಮಂತ್ರಿಯಾಗಿದ್ದರು.

ಜೂನ್‌ನಲ್ಲಿ ಅವರ ರಾಜ್ಯಸಭೆಯ ಅವಧಿ ಕೊನೆಗೊಂಡಿತ್ತು. ಆದರೆ ಅಸ್ಸಾಂ ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರ ಬಲ ಕಡಿಮೆಯಾದ ಕಾರಣ ಕಾಂಗ್ರೆಸ್ ಯಾವುದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲ. 126 ಸದಸ್ಯ ಬಲದ ಅಸ್ಸಾಂ ವಿಧಾನಸಭೆಯಲ್ಲಿ ಕಾಂಗ್ರೆಸ್ ಕೇವಲ 25 ಶಾಸಕರನ್ನು ಹೊಂದಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.