ಕೆ.ಎನ್.ಪಿ.ವಾರ್ತೆ,ನವದೆಹಲಿ,ಸೆ.08;

ಇಂದು ನಿಧನರಾದ ಖ್ಯಾತ ವಕೀಲ, ಮಾಜಿ ಕೇಂದ್ರ ಸಚಿವ ರಾಮ್ ಜೇಠ್ಮಲಾನಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಜಕೀಯ ಕ್ಷೇತ್ರದ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಜೇಠ್ಮಲಾನಿ ಅವರ ನಿಧನ ನಿಜಕ್ಕೂ ನೋವು ತಂದಿದೆ. ತಮ್ಮ ಅಭಿಪ್ರಾಯಗಳನ್ನು ಸಾರ್ವಜನಿಕವಾಗಿ ಯಾವುದೇ ಮುಲಾಜಿಲ್ಲದೇ ಹೇಳುತ್ತಿದ್ದ ಅವರ ಗುಣ ಅಪರೂಪವಾದದ್ದು. ಅವರ ನಿಧನದಿಂದಾಗಿ ದೇಶ ಶ್ರೇಷ್ಠ ನ್ಯಾಯಶಾಸ್ತ್ರಜ್ಞನನ್ನು ಕಳೆದುಕೊಂಡಿದೆ ಎಂದು ರಾಷ್ಟ್ರಪತಿ ಕೋವಿಂದ್ ಟ್ವೀಟ್ ಮಾಡಿದ್ದಾರೆ.

ತಮ್ಮ ಬುದ್ದಿಯಿಂದಲೇ ಮಾತನಾಡುತ್ತಿದ್ದ ಪಂಡಿತನನ್ನು ದೇಶ ಕಳೆದುಕೊಂಡಿದ್ದು, ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸರ್ಕಾರವನ್ನು ಖಂಡಿಸುತ್ತಿದ್ದ ಅವರ ಕಾರ್ಯ ವೈಖರಿ ಹಲವರಿಗೆ ಆದರ್ಶವಾಗಿತ್ತು. ಸಾಕಷ್ಚು ಜನರಿಗೆ ರಾಮ್ ಜೇಠ್ಮಲಾನಿ ಸಹಾಯ ಮಾಡಿದ್ದು, ಇದು ಅವರ ಜೀವನದ ಅಂಗವೇ ಆಗಿತ್ತು. ಅವರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಅಂತೆಯೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ರಾಮ್ ಜೇಠ್ಮಲಾನಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

http://karnatakanewsportal.com/maji-kendra-kanunu-sachiva-ramjetmalani-nidhana/

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.