ಕೆ.ಎನ್.ಪಿ.ವಾರ್ತೆ,ಹಾವೇರಿ,ನ.25;

ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರ ದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ಮಲ್ಲಿಕಾರ್ಜುನ ಹಲಗೇರಿ ಇಂದು ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರ ದ ಹಲಗೇರಿ, ಇಟಗಿ, ಹೊಸಳ್ಳಿ, ಮುದೇನೂರು, ಸಾತನೂರು ಗ್ರಾಮಗಳಿಗೆ ಭೇಟಿ ನೀಡಿ, ಮನೆಮನೆಗೆ ತೆರಳಿ ಮತಯಾಚಿಸಿದರು.

ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರ : ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಹಲಗೇರಿ ಮತಯಾಚನೆ

ಈ ಸಂದರ್ಭದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಅನರ್ಹ ಶಾಸಕರು ತಮ್ಮ ವೈಯಕ್ತಿಕ ಉದ್ದೇಶಕ್ಕಾಗಿ ಒಂದು ವರ್ಷಕ್ಕೂ ಹೆಚ್ಚು ಕಾಲ ತಮ್ಮ ಕರ್ತವ್ಯ ಮರೆತು ಅಲೆದಾಡಿದರು.

ನೆರೆಹಾವಳಿಯಿಂದ ಕ್ಷೇತ್ರದ ಜನತೆ ಸಂಕಷ್ಟಕ್ಕೆ ಈಡಾದರೆ ಕ್ಷೇತ್ರದತ್ತ ಸುಳಿಯದೇ ಕ್ಷೇತ್ರದ ಜನತೆಗೆ ದ್ರೋಹ ಮಾಡಿದ್ದಾರೆ.

ಒಮ್ಮೆ ನಂಬಿ ಆಯ್ಕೆ ಮಾಡಿದ್ದರು. ಕೊಟ್ಟ ಕುದುರೆ ಏರಲಾಗದವ ವೀರ ಅಲ್ಲ, ಶೂರನು ಅಲ್ಲ. ಈಗ ಬಿಜೆಪಿ ಸೇರಿಕೊಂಡು ಹೊಸ ಆಟ ಪ್ರಾರಂಭಿಸಿದ್ದಾರೆ.

ಕ್ಷೇತ್ರದ ಪ್ರಜ್ಞಾವಂತ ಮತದಾರರು ಈ ಬಾರಿ ತಕ್ಕಪಾಠ ಕಲಿಸಲಿದ್ದಾರೆ.

ಕ್ಷೇತ್ರದ ಪ್ರಜ್ಞಾವಂತ ಮತದಾರರು ಜೆಡಿಎಸ್ ಪಕ್ಷಕ್ಕೆ ತಮ್ಮ ಅತ್ಯಮೂಲ್ಯವಾದ ಮತವನ್ನು ನೀಡಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕೈಜೋಡಿಸಬೇಕು. ಈ ಬಾರಿ ಗೆಲುವು ನನ್ನದೇ ಎಂದರು.

ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರ : ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಹಲಗೇರಿ ಮತಯಾಚನೆ

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಕೆ.ಎಸ್. ಸಿದ್ದಬಸಪ್ಪ ಯಾದವ್, ರಾಜ್ಯ ಕಾರ್ಯದರ್ಶಿಯಾದ ಶಿವಕುಮಾರ್ ಮಠದ, ಜಿಲ್ಲಾ ವಕ್ತಾರ ಮಹಾಂತೇಶ್, ಬೇವಿನ ಹಿಂಡಿ, ಸಂತೋಷ್ ಮಾಕನೂರು, ಬಸವರಾಜ ಪಾಟೀಲ್, ಶಂಕ್ರಣ್ಣ ಹಾದಿಮನಿ, ಮಲ್ಲಿಕಾರ್ಜುನ, ಮಲ್ಲಿಕಾರ್ಜುನ ಎ ಎಚ್, ಈರಣ್ಣ ಹಲಗೇರಿ, ಶ್ರೀಶೈಲ ಮಲ್ಲಾಪುರ, ಕುಬೇರ್ ನಾಗೇನಹಳ್ಳಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.