ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.29;

 ದಿಢೀರ್ ಕಾರ್ಯಾಚರಣೆ ನಡೆಸಿದ ಬೆಂಗಳೂರು ನಗರ ಪೊಲೀಸರು 500ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.

ರಾತ್ರಿ ವೇಳೆ ನಗರದಲ್ಲಿ ಹೆಚ್ಚು ಅಪರಾಧ ಪ್ರಕರಣಗಳು ನಡೆಯುವುದರಿಂದ ತೀವ್ರ ಎಚ್ಚರ ವಹಿಸಿರುವ ಬೆಂಗಳೂರು ಪೊಲೀಸರು ರಾತ್ರೋರಾತ್ರಿ ದಿಢೀರ್ ಕಾರ್ಯಾಚರಣೆ ನಡೆಸಿದ್ದಾರೆ.

ಬೆಂಗಳೂರು ನಗರದಲ್ಲಿ ರಾತ್ರಿ ವೇಳೆಯಲ್ಲಿನ ಕಾನೂನು ಬಾಹಿರ ಚಟುವಟಿಕೆಗಳು, ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರು ನಗರ ಪೊಲೀಸರು ನಗರದಾದ್ಯಂತ ನಾಕಾಬಂಧಿ ತಪಾಸಣೆಯನ್ನು ಕೈಗೊಂಡು 499 ಕ್ಕೂ ಹೆಚ್ಚು ಸಂಶಯಾಸ್ಪದರನ್ನು ವಿಚಾರಣೆಗೊಳಪಡಿಸಿದ್ದು, ಸುಮಾರು 500 ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು ಎಂದು ಟ್ವೀಟ್ ಮಾಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.