ಕೆ.ಎನ್.ಪಿ.ವಾರ್ತೆ,ಗುತ್ತಲ,ಅ.29;

ಗುತ್ತಲ ಪಟ್ಟಣದಲ್ಲಿ ಶ್ರೀ ಜಗದ್ಗುರು ರೇಣುಕಚಾರ್ಯ ಯುಗಮಾನೋತ್ಸವ ಹಾಗೂ ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾ ಪೂಜೆ ಧರ್ಮ ಜಾಗೃತಿ ಸಮಾರಂಭ ನಿಮಿತ್ಯ ಅ.30 ರಿಂದ ನ.5ರವರಗೆ ಪಟ್ಟಣದ ಎಪಿಎಂಸಿ ಯಾರ್ಡನಲ್ಲಿ ಪ್ರತಿದಿನ ಸಂಜೆ 7 ರಿಂದ ರೇಣುಕ ವಿಜಯ ಪುರಾಣ ಪ್ರವಚನ ಜರಗುವುದು.

ಅಮ್ಮಿನಭಾವಿ ಪಂಚಗ್ರಹ ಹಿರೇಮಠದ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಪ್ರವಚನ ನೀಡುವರು. ಮಹಾಂತೇಶ ಗವಾಯಿಗಳು ನರಸಲಗಿ ಸಂಗೀತಕ್ಕೆ ರುದ್ರೇಶ ಗದಗ ತಬಲಾ ಸಾಥ್ ನೀಡುವರು. ಗುತ್ತಲ ಕಲ್ಮಠದ ಗುರುಸಿದ್ದ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸುವರು. ನೆಗಳೂರಿನ ಗುರುಶಾಂತೇಶ್ವರ ಸ್ವಾಮೀಜಿ ನೇತೃತ್ವ ವಹಿಸುವರು.

  • ನ. 6 ರಿಂದ ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ
  • ನ. 6, 7,8 ಮೂರು ದಿನಗಳ ಕಾಲ ಪಟ್ಟಣದ ಸಂಗನಬಸವ ಕಲ್ಯಾಣ ಮಂಟಪದಲ್ಲಿ ರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ ಪ್ರತಿದಿನ ಬೆಳಗ್ಗೆ 8 ರಿಂದ ಜರಗುವುದು.
  • ಸಂಜೆ 7 ರಿಂದ ಜಗದ್ಗುರುಗಳ ಸಾನ್ನಿದ್ಯದಲ್ಲಿ ಎಪಿಎಂಸಿ ಯಾರ್ಡನಲ್ಲಿರುವ ಧರ್ಮ ವೇದಿಕೆ ಯಲ್ಲಿ ಧರ್ಮ ಜಾಗೃತಿ ನಡೆಯುವುದು.

ಸಮಾರಂಭದಲ್ಲಿ ನಾಡಿನ ವಿವಿಧ ಮಠಗಳ ಮಠಾಧೀಶರು, ರಾಜಕೀಯ ಮುಖಂಡರುಗಳು, ಧರ್ಮಾಭಿಮಾನಿಗಳು, ಸುತ್ತ ಮುತ್ತಲಿನ ಗ್ರಾಮಗಳ ಸದ್ಭಕ್ತರು ಭಾಗವಹಿಸುವರು ಎಂದು ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ : ಗುರುಶಾಂತಸ್ವಾಮಿ ಹಿರೇಮಠ

ಕೆ.ಎನ್.ಪಿ.ಯ ಸಮಸ್ತ ಓದುಗ ಬಳಗಕ್ಕೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ಧಿಕ ಶುಭಾಶಯಗಳು…

ಬೆಳಕಿನ ಹಬ್ಬ ನಿಮಗೆ ಸುಖ, ಸಂಪತ್ತು, ನೆಮ್ಮದಿ ಕರುಣಿಸಲಿ. ನಿಮ್ಮ ಜೀವನ ಸಮೃದ್ಧಿಯ ಹಾದಿಯಲ್ಲಿ ಸಾಗಲಿ….. ದೀಪದಂತೆ ನಿಮ್ಮ ಬದುಕೂ ಪ್ರಕಾಶಮಾನವಾಗಿರಲಿ. ನಿಮ್ಮ ಮತ್ತು ನಿಮ್ಮ ಪ್ರೀತಿಪಾತ್ರರ ಜೀವನ ಉಜ್ವಲವಾಗಲಿ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.