ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.26;

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಶಾಸಕರಾದ ಆರ್ ಶಂಕರ್, ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ಅವರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಅವರು ಗುರುವಾರ ಆದೇಶ ನೀಡಿದ್ದಾರೆ.

ನಿನ್ನೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ ಅವರು, ಈ ಮೂವರು ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸುವಂತೆ ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ನೀಡಿದ ದೂರಿನ ಆಧಾರದ ಅನರ್ಹಗೊಳಿಸಲಾಗಿದೆ ಎಂದು ತಿಳಿಸಿದರು.

ಪಕ್ಷಾಂತರ ನಿಷೇಧ ಕಾಯ್ದೆಯಡಿ ರಾಣೆಬೆನ್ನೂರು ಶಾಸಕ ಆರ್ ಶಂಕರ್, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಈ ಮೂವರ ಅನರ್ಹತೆ 2023 ಮೇ ತಿಂಗಳವರೆಗೆ ಊರ್ಜಿತದಲ್ಲಿರುತ್ತದೆ ಎಂದು ಸ್ಪೀಕರ್ ಹೇಳಿದರು.

ಅನರ್ಹಗೊಂಡ ಶಾಸಕರು ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ಈ ವಿಧಾನಸಭೆ ಅವಧಿ ಇರುವವರೆಗೂ ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ಆದರೆ ಇವರು ಕಾನೂನು ಹೋರಾಟ ನಡೆಸಬಹುದು ಎಂದು ರಮೇಶ್‌ ಕುಮಾರ್‌ ಸ್ಪಷ್ಟಪಡಿಸಿದರು.

ಉಳಿದ 13 ಅತೃಪ್ತ ಶಾಸಕರ ‌ರಾಜೀನಾಮೆ‌ ವಿಚಾರವನ್ನು ಶೀಘ್ರವಾಗಿ ಇತ್ಯರ್ಥ ‌ಮಾಡಲಾಗುವುದು. ವಾರ, ತಿಂಗಳಲ್ಲ, ಕೆಲವೇ ದಿನಗಳಲ್ಲಿ ಇತ್ಯರ್ಥಪಡಿಸಲಾಗುವುದು ಎಂದು ಸ್ಪೀಕರ್ ಸ್ಪಷ್ಟಪಡಿಸಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.