ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.22;

ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದ ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸಲು ಇಂದು ಕಾರ್ಖಾನೆ ಮಾಲೀಕರ ಜತೆ ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸುತ್ತಿದ್ದಾರೆ.

ಮಂಗಳವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಡೆಸಿದ ಮ್ಯಾರಥಾನ್ ಸಭೆಯಲ್ಲಿ, ರೈತರು ಪ್ರತಿ ಟನ್ ಕಬ್ಬಿಗೆ 2930 ರೂ. ನೀಡಬೇಕೆಂದು ಬೇಡಿಕೆಯಿಟ್ಟಿದ್ದರು. ಅಲ್ಲದೆ, ಕಟಾವಿಗೆ ಮೊದಲೇ ಕಬ್ಬಿಗೆ ದರ ನಿಗದಿ ಮಾಡಬೇಕು ಹಾಗೂ ಬಾಕಿ ಹಣ ಪಾವತಿಸಬೇಕೆಂದು ಆಗ್ರಹಿಸಿದ್ದರು.

ಈ ಬಗ್ಗೆ ಕಬ್ಬಿನ ದರ ನಿಗದಿಗೆ ಸಂಬಂಧಿಸಿದಂತೆ ಇಂದು ಕಾರ್ಖಾನೆ ಮಾಲೀಕರ ಜತೆ ಸಭೆ ನಡೆಸಿ ಪರಿಹಾರ ನೀಡುವುದಾಗಿ ಸಿಎಂ ಭರವಸೆ ನೀಡಿದ್ದರು. ಹೀಗಾಗಿ ಇಂದಿನ ಸಭೆ ಮಹತ್ವ ಪಡೆದುಕೊಂಡಿದ್ದು, ಇನ್ನೊಂದೆಡೆ ಸಿಎಂ ಭರವಸೆ ಹಾಗೂ ಇಂದಿನ ಸಭೆಯ ಹೊರತಾಗಿಯೂ ರೈತರು ಪ್ರತಿಭಟನೆ ಮುಂದುವರಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.