ಕೆ.ಎನ್.ಪಿ.ವಾರ್ತೆ,ಹಾವೇರಿ,ಡಿ.13;

ತಾಲೂಕಿನ ನೆಗಳೂರ ಗ್ರಾಮದ ಮೈಲಾರಲಿಂಗೇಶ್ವರ ದೇವಾಲಯದಲ್ಲಿ ಗುರುವಾರ ಕಾರ್ತಿಕದೀಪೋತ್ಸವ ಸಂಭ್ರಮದಿಂದ ಜರುಗಿತು.

ನೂರಾರು ಸಂಖ್ಯೆಯ ಕಾಯಕೋಲು ದೀಪ ಬೆಳಗಿಸಲಾಯಿತು. ಕುದರಿಕಾರರ ಕುಣಿತ ನೋಡುಗರ ಗಮನಸೆಳೆಯಿತು. ಇದಕ್ಕೂ ಪೂರ್ವದಲ್ಲಿ ಮೈಲಾರಲಿಂಗೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಬಾಲವೃದ್ಧರಾದಿಯಾಗಿ ಗ್ರಾಮ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಸದ್ಭಕ್ತರು ದೀಪ ಬೆಳಗಿಸಿ ಭಕ್ತಿ ಮೆರೆದರು. ಗ್ರಾ.ಪಂ.ಸದಸ್ಯ ಕೆ.ಎಂ.ಮೈದೂರ, ರೈತ ಮುಖಂಡ ಕೃಷ್ಣರೆಡ್ಡಿ ಛಪ್ಪರದ, ಸೋಮಶೇಖರರೆಡ್ಡಿ ಮೈದೂರ, ಶ್ರೀನಿವಾಸ ಛಪ್ಪರದ, ಹನುಮರೆಡ್ಡಿ ಹಾವರೆಡ್ಡರ, ಕಾಂತೇಶರೆಡ್ಡಿ ಶಟ್ಟೆಪ್ಪನವರ, ರವಿಚಂದ್ರ ಬಾಲಣ್ಣನವರ, ಕೋಟೆಪ್ಪ ಸಪ್ಪಿನ್, ಕೋಟೆಪ್ಪ ಕೊಪ್ಪದ ಇತರರು ಸಹಸ್ರಾರು ಸಂಖ್ಯೆಯಲ್ಲಿ ಸದ್ಭಕ್ತರು ಪಾಲ್ಗೊಂಡಿದ್ದರು.

ವರದಿ : ಗುರುಶಾಂತಸ್ವಾಮಿ ಹಿರೇಮಠ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.