ಕೆ.ಎನ್.ಪಿ.ವಾರ್ತೆ,ರಾಮನಗರ,ಜು.24;
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್‌ಪಾಸ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ರಾಮನಗರದಲ್ಲಿ ನಿನ್ನೆ ನಡೆದ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್‌ಪಾಸ್ ನೀಡಲಾಗುತ್ತದೆ.
ಖಾಸಗಿ ಶಾಲೆ ಮಕ್ಕಳು ಡೊನೇಶನ್ ನೀಡಿ ಶಾಲೆಗೆ ಹೋಗುತ್ತಾರೆ ಅವರಿಗೆ ದುಡ್ಡುಕೊಟ್ಟು ಬಸ್‌ನಲ್ಲಿ ಪ್ರಯಾಣಿಸುವುದು ಅಂತಹುದೇನು ಕಷ್ಟವಾಗುವುದಿಲ್ಲ. ಲಕ್ಷಾಂತರ ರೂ ಡೋನೇಷನ್ ನೀಡಿ ಖಾಸಗಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಉಚಿತ ಬಸ್ ಪಾಸ್ ಅಗತ್ಯವಿಲ್ಲ. ಆದ್ದರಿಂದ ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುವುದು.
ಉಚಿತ ಬಸ್‌ಪಾಸ್ ಬೇಕಿದ್ದರೆ ಸರ್ಕಾರಿ ಶಾಲೆಗಳಿಗೆ ಬರಲಿ ಅವರಿಗೂ ಬಸ್‌ಪಾಸ್ ಕೊಡೋಣ ಎಂದರು. ಶೀರ್ಘದಲ್ಲಿ ಸಭೆ ಕರೆದು ಈ ಕುರಿತು ಚರ್ಚೆ ನಡೆಸಿ ಒಂದು ತೀರ್ಮಾನಕ್ಕೆ ಬರುವುದಾಗಿ ತಿಳಿಸಿದ್ದಾರೆ.
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.