ಕೆ.ಎನ್.ಪಿ.ವಾರ್ತೆ,ಮೈಸೂರು,ಆ.29;

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.7ರಂದು ಬೆಂಗಳೂರಿಗೆ ಆಗಮಿಸಲಿದ್ದು, ರಾಜ್ಯದ ನೆರೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಹೆಚ್ಚಿನ ಆರ್ಥಿಕ ನೆರವು ಒದಗಿಸುವಂತೆ ಅವರಲ್ಲಿ ಮನವಿ ಮಾಡಿಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಗುರುವಾರ ಇಲ್ಲಿನ ಲಲಿತ ಮಹಲ್ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ನೆರೆ ಅನಾಹುತ ಸಂಭವಿಸಿದೆ. ಕೇಂದ್ರದ ಒಂದು ತಂಡ ನೆರೆ ಪೀಡಿತ ಪ್ರದೇಶಗಳಲ್ಲಿ ಅಧ್ಯಯನ ನಡೆಸಿದೆ. ಕೇಂದ್ರ ಸರಕಾರದಿಂದ ಇನ್ನು 3-4 ದಿನಗಳಲ್ಲಿ ನೆರೆ ಪರಿಹಾರ ಹಣ ಬರುವ ನಿರೀಕ್ಷೆ ಇದೆ ಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.7ರಂದು ಬೆಂಗಳೂರಿಗೆ ಭೇಟಿ ನೀಡಿದಾಗ ರಾಜ್ಯದ ನೆರೆ ಪರಿಸ್ಥಿತಿ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದರು.

ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು, ಮಾಜಿ ಸಚಿವ ಜಿ ಟಿ ದೇವೇಗೌಡರು ಸ್ವಾಗತಿಸಿದರು. ಈ ವೇಳೆ ನೂತನ ಸಚಿವರಾದ ಆರ್ ಅಶೋಕ್, ವಿ ಸೋಮಣ್ಣ ಸೇರಿದಂತೆ ಬಿಜೆಪಿ ನಾಯಕರಾದ ಪ್ರತಾಪ ಸಿಂಹ್ ಹಾಗೂ ಎ ರಾಮದಾಸ್ ಉಪಸ್ಥಿತರಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.