ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಆ.21;

ಹೊಸಪೇಟೆ-ಕೊಟ್ಟೂರು ನಡುವಿನ 71 ಕಿ.ಮೀ. ಮಾರ್ಗದಲ್ಲಿ ಪ್ಯಾಸೆಂಜರ್ ರೈಲು ಸಂಚಾರ ನಡೆಸಬೇಕು ಎಂಬ ಹಲವು ವರ್ಷಗಳ ಜನರ ಬೇಡಿಕೆಗೆ ನೈಋತ್ಯ ರೈಲ್ವೆ ಒಪ್ಪಿಗೆ ನೀಡಿದ್ದು, ಹೊಸಪೇಟೆ-ಕೊಟ್ಟೂರು ನಡುವೆ ಪ್ಯಾಸೆಂಜರ್ ರೈಲು ಸಂಚಾರ ಸೆಪ್ಟೆಂಬರ್ 15ರಿಂದ ಆರಂಭವಾಗಲಿದೆ.

ಈಗಾಗಲೇ ಕೊಟ್ಟೂರು-ಹರಿಹರ ನಡುವೆ ರೈಲು ಸಂಚಾರ ನಡೆಸುತ್ತಿದೆ. ನೈಋತ್ಯ ರೈಲ್ವೆ ವಿಭಾಗೀಯ ಪ್ರಧಾನ ವ್ಯವಸ್ಥಾಪಕ ಅಜಯ್ ಕುಮಾರ್ ಸಿಂಗ್ ರೈಲು ಸಂಚಾರದ ಕುರಿತು ಮಾಹಿತಿ ನೀಡಿದ್ದು, “ಹೊಸಪೇಟೆ-ಕೊಟ್ಟೂರು ರೈಲು ಹರಿಹರ ಸಮೀಪದ ಅಮರಾವತಿ ಕಾಲೋನಿ ತನಕ ಸಂಚಾರ ನಡೆಸಲಿದೆ” ಎಂದು ಹೇಳಿದರು.

“ರೈಲು ಮಾರ್ಗದ ಸುರಕ್ಷತೆ ಕುರಿತು ಪರಿಶೀಲನೆ ನಡೆಸಲು ಸೆಪ್ಟೆಂಬರ್ ಮೊದಲ ವಾರದಲ್ಲಿ ರೈಲ್ವೆ ಸುರಕ್ಷತಾ ಮಂಡಳಿ ಕಮೀಷನರ್ ತಂಡ ಆಗಮಿಸಲಿದೆ. ತಂಡ ಪರೀಕ್ಷಾರ್ಥ ಸಂಚಾರ ನಡೆಸಿ, ಒಪ್ಪಿಗೆ ನೀಡಲಿದೆ” ಎಂದು ತಿಳಿಸಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.