ಕೆ.ಎನ್.ಪಿ.ವಾರ್ತೆ,ಬೆಳಗಾವಿ,ಜೂ.20;

ರಾಮದುರ್ಗ ತಾಲ್ಲೂಕಿನ ಲಖನಾಯ್ಕನಕೊಪ್ಪ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸುಮಾರು 60 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ.

ಅಸ್ವಸ್ಥಗೊಂಡ ಮಕ್ಕಳನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಅಪಾಯವಿಲ್ಲ ಎಂದು ತಿಳಿದುಬಂದಿದೆ. ಮಾಹಿತಿ ತಿಳಿದು ಗಾಬರಿಗೊಂಡ ಪಾಲಕರು ಆಸ್ಪತ್ರೆಗೆ ಮುತ್ತಿಗೆ ಹಾಕಿದ್ದು, ಇತ್ತ ಕಡೆ ಮಕ್ಕಳನ್ನು ಸಮಾಧಾನಪಡಿಸಿ, ಚಿಕಿತ್ಸೆ ನೀಡಲು ವೈದ್ಯರು ಪರದಾಡುತ್ತಿದ್ದಾರೆ.

ಶಾಸಕ ಮಹಾದೇವಪ್ಪ ಯಾದವಾಡ ಅವರು ಆಸ್ಪತ್ರೆಗೆ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿದರು. ಅಲ್ಲದೇ, ಘಟನಾ ಸ್ಥಳಕ್ಕೆ ರಾಮದುರ್ಗ ಪೊಲೀಸರು ಭೇಟಿ ನೀಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

9513326661

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.