ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಸೆ.09;

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್‌ಟಿಡಿಸಿ)ವು ಇಂಗ್ಲೆಂಡ್‌ನ ಲಂಡನ್‌ ಮಾದರಿಯಲ್ಲಿ ರಾಜ್ಯದ ಐತಿಹಾಸಿಕ ನಗರಗಳಾದ ಮೈಸೂರು ಮತ್ತು ಹಂಪಿಯಲ್ಲಿ ಡಬಲ್‌ ಡೆಕ್ಕರ್‌ ಬಸ್‌ ಸೇವೆ ಪ್ರಾರಂಭಿಸಲು ನಿರ್ಧರಿಸಿದೆ.

ಉಭಯ ಐತಿಹಾಸಿಕ ತಾಣಗಳಿಗೆ ಡಬಲ್‌ ಡೆಕ್ಕರ್‌ ಬಸ್‌ ಸೇವೆ ಆರಂಭಿಸಲು ಹಿಂದಿನ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರ 5 ಕೋಟಿ ರೂ. ಅನುದಾನ ಮಂಜೂರುಮಾಡಿತ್ತು.

ಬಸ್‌ಗಳ ನಿರ್ಮಾಣ ಹಾಗೂ ಪ್ರವಾಸೋದ್ಯಮ ಇಲಾಖೆಗೆ ಆರು ಡಬಲ್‌ ಡೆಕ್ಕರ್‌ ಬಸ್‌ ಪೂರೈಕೆಗೆ ಈಗಾಗಲೇ ಟೆಂಡರ್‌ ಆಹ್ವಾನಿಸಲಾಗಿದೆ. ಮುಂದಿನ ಐದಾರು ತಿಂಗಳಲ್ಲಿ ಈ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಬಸ್‌ನಲ್ಲಿ ಕೆಳಗೆ ಹಾಗೂ ಮೇಲ್ಭಾಗದಲ್ಲಿ ಪ್ರಯಾಣಿಕರು ಕುಳಿತುಕೊಳ್ಳಬಹುದಾಗಿದೆ. ಇಡೀ ಬಸ್‌ ಬಹುತೇಕ ಗಾಜಿನಿಂದ ಕೂಡಿರುತ್ತದೆ. ಐತಿಹಾಸಿಕ ಸ್ಮಾರಕಗಳನ್ನು ಬಸ್‌ನಲ್ಲೇ ಕುಳಿತು ಕಣ್ತುಂಬಿಕೊಳ್ಳಬಹುದಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.