ಕೆ.ಎನ್.ಪಿ.ವಾರ್ತೆ,ಶಿವಮೊಗ್ಗ,ಆ.31;

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆ. ಎಸ್. ಈಶ್ವರಪ್ಪರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಅವರು, ಯಡಿಯೂರಪ್ಪ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆಯ ಸಚಿವರು.

ಶನಿವಾರ ಶಿವಮೊಗ್ಗದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, “ಈಶ್ವರಪ್ಪ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು” ಎಂದು ಘೋಷಣೆ ಮಾಡಿದರು. ಯಡಿಯೂರಪ್ಪ ತವರು ಜಿಲ್ಲಾ ಪ್ರವಾಸದಲ್ಲಿದ್ದು, ಜಿಲ್ಲಾ ಪಂಚಾಯತ್‌ನಲ್ಲಿ ಸಭೆ ನಡೆಸಿದರು.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಚಿವ ಸಂಪುಟ ವಿಸ್ತರಣೆ ಮಾಡಿ ಖಾತೆ ಹಂಚಿಕೆ ಮಾಡಿದ್ದಾರೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿಲ್ಲ. ಮೈಸೂರಿನಲ್ಲಿ ದಸರಾ ಹಿನ್ನಲೆಯಲ್ಲಿ ವಿ. ಸೋಮಣ್ಣರನ್ನು ದಸರಾ ಉಸ್ತುವಾರಿಯಾಗಿ ಮಾತ್ರ ನೇಮಿಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.