ಕೆ.ಎನ್.ಪಿ.ವಾರ್ತೆ,ಧಾರವಾಡ,ಆ.04;

ಬೆಳಗಾವಿಯನ್ನು ಕರ್ನಾಟಕದ ಎರಡನೇ ರಾಜಧಾನಿಯನ್ನಾಗಿ ಮಾಡಿದ್ದೆ ಆದಲ್ಲಿ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ ಠಾಕ್ರೆ ನೀಡಿರುವ ಹೇಳಿಕೆಯನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಬೆಳಗಾವಿ ವಿಭಾಗೀಯ ಅಧ್ಯಕ್ಷ ಪಾಪು ಧಾರೆ ಖಂಡಿಸಿದ್ದಾರೆ.

ಬೆಳಗಾವಿಯನ್ನು ಕರ್ನಾಟಕದ ಎರಡನೇ ರಾಜಧಾನಿಯನ್ನಾಗಿ ಮಾಡಿ ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದರು.
ಶಿವಸೇನೆ ಹೇಳಿಕೆಯಿಂದ ಕರ್ನಾಟಕದ ಜನತೆಗೆ ಅಪಮಾನವಾಗಿದೆ.

ಶಾಂತ ಸ್ವಭಾವದ ಕನ್ನಡಿಗರನ್ನು ಕೆಣಕುತ್ತಿದ್ಧಾರೆ. ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿಯನ್ನಾಗಿ ಮಾಡುವುದು. ಉತ್ತರ ಕರ್ನಾಟಕದ ಜನತೆಗೆ ಅನುಕೂಲವಾಗಲೆಂದು ಕೆಲವು ಮಹತ್ತರ ಸರ್ಕಾರಿ ಇಲಾಖೆಗಳನ್ನು ಸುವರ್ಣಸೌಧಕ್ಕೆ ಸ್ಥಳಾಂತರಿಸುವುದು. ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳನ್ನು ಅಭಿವೃದ್ದಿ ಪಥದತ್ತ ತೆಗೆದುಕೊಂಡು ಹೋಗುವಂತಹದು. ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹಾಗೂ ಕರ್ನಾಟಕ ಜನತೆಗೆ ಬಿಟ್ಟಂತಹ ವಿಷಯ. ಇದಕ್ಕೆ ವಿರೋಧ ವ್ಯಕ್ತಪಡಿಸಿರುವದು ಶಿವಸೇನೆಯ ಮುಖ್ಯಸ್ಥ ಉದ್ದವ್ ಠಾಕ್ರೆ ಅವರಿಗೆ ಶೋಭೆ ತರುವಂತಹದ್ದಲ್ಲ.

ಕೂಡಲೇ ಅವರು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಹಾಗೂ ಸಮಸ್ತ ಕರ್ನಾಟಕದ ಜನತೆಗೆ ಕ್ಷಮೆಯಾಚಿಸಬೇಕು ಹಾಗೂ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಪಾಪು ಧಾರೆ ಆಗ್ರಹಿಸಿದ್ದಾರೆ.

ಒಂದು ವೇಳೆ ಅವರು ಕ್ಷಮೆ ಯಾಚಿಸದಿದ್ದರೆ ಮುಂಬರುವ ದಿನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷ ಪಿ. ಕೃಷ್ಣೇಗೌಡರು ಮುಖಂಡತ್ವದಲ್ಲಿ ಉಗ್ರ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಹಾಗೂ ಈ ಕೂಡಲೇ ರಾಜ್ಯ ಸರ್ಕಾರ ಅವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಸರಕಾರಕ್ಕೆ ಒತ್ತಾಯಿಸಬೇಕೆಂದು ಧಾರವಾಡ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ವರದಿ : ಚಂದ್ರು ಹಿರೇಮಠ ಧಾರವಾಡ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.