ಕೆ.ಎನ್.ಪಿ.ವಾರ್ತೆ,ಶಿವಮೊಗ್ಗ,ನ.02;

ನ.05 ರಂದು ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ ಚೈತನ್ಯ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದ ಮೂಲಕ ಪಕ್ಷ ಸಂಘಟನೆಗೆ ಹುರುಪು ನೀಡಲು ಸಿದ್ದರಾಮಯ್ಯ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ.

ಹಿರೇಕೆರೂರು, ಯಲ್ಲಾಪುರ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಿದೆ. ಈ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಕಾರ್ಯಕರ್ತರು ಹಾಗೂ ಮುಖಂಡರ ಬೆಂಬಲ ಅಗತ್ಯವಿದೆ‌. ಹೀಗಾಗಿ ಈ ಎರಡು ಮತಕ್ಷೇತ್ರಗಳನ್ನು ಗೆಲ್ಲಲು ಸೊರಬ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಬೆಂಬಲವೂ ಅಗತ್ಯವಿದೆ. ಈ ನಿಟ್ಟಿನಲ್ಲಿ ಉಪಚುನಾವಣೆಯ ಜವಾಬ್ದಾರಿ ಹೊತ್ತಿರುವ ಸಿದ್ದರಾಮಯ್ಯ ಸಮಾವೇಶದ ಮೂಲಕ ಪಕ್ಷದ ಕಾರ್ಯಕರ್ತರಲ್ಲಿ ಚೈತನ್ಯ ತುಂಬಲು ಮುಂದಾಗಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗೆ ಎರಡು ಬಾರಿ ಕಾಂಗ್ರೆಸ್ ಬೆಂಬಲ ನೀಡಿದೆ. ಈ ಬಾರಿ ಉಪಚುನಾವಣೆಗೆ ಮಧುಬಂಗಾರಪ್ಪ ಕಾಂಗ್ರೆಸ್ ಕಾರ್ಯಕರ್ತರ ಪರ ನಿಲ್ಲಲಿ ಎಂದು‌ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಶೇಷಾದ್ರಿ ಹಾಗೂ ಮುಖಂಡ ರಾಜು ಎಂ.ತಲ್ಲೂರು ಆಗ್ರಹಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.