ಕೆ.ಎನ್.ಪಿ.ವಾರ್ತೆ,ಮಂಗಳೂರು,ಆ.03;

ನಿಗೂಢವಾಗಿ ಸಾವಿಗೀಡಾದ ಕೆಫೆ ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಲಭ್ಯವಾಗಿದ್ದು, ಸಿದ್ದಾರ್ಥ್‌ ಅವರು ನೇತ್ರಾವತಿ ನದಿಯಲ್ಲಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಹೇಳಿದೆ.

ಈ ವರದಿಯಲ್ಲಿ ಸಿದ್ಧಾರ್ಥ ಅವರ ದೇಹದ ಯಾವೆಲ್ಲ ಭಾಗಕ್ಕೆ ಏಟಾಗಿತ್ತು ಎಂಬೆಲ್ಲ ಮಾಹಿತಿ ಇದೆ ಎನ್ನಲಾಗಿದೆ. ಆದರೆ ಅಂತಿಮ ವರದಿ ಬಂದ ಮೇಲೆ ಮಾತ್ರವೇ ಸಾವಿಗೆ ನಿಜವಾದ ಕಾರಣ ಏನು ಎಂಬುದು ತಿಳಿಯಲಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆ ಅಧೀಕ್ಷಕರು ಶುಕ್ರವಾರ ವರದಿಯನ್ನು ತನಿಖಾಧಿಕಾರಿ ಕೋದಂಡರಾಮ ಅವರಿಗೆ ಸಲ್ಲಿಸಿದ್ದು, ಸಿದ್ದಾರ್ಥ ಸಾವಿನ ಹಿಂದೆ ಕೊಲೆ ಅಥವಾ ಇನ್ನಾವುದೇ ರೀತಿಯ ಸಂಚು ಕೆಲಸ ಮಾಡಿದೆ ಎಂಬ ಊಹಾಪೋಹಗಳನ್ನು ವರದಿಯ ಸಾರ ತಳ್ಳಿಹಾಕಿದೆ.

ಸಿದ್ದಾರ್ಥ್ ಅವರ ಸಾವಿಗೆ ಸ್ಪಷ್ಟ ಕಾರಣ ಅಂತಿಮ ವರದಿಯಲ್ಲಿ ಗೊತ್ತಾಗಲಿದೆ. ಪ್ರಾಥಮಿಕ ವರದಿಯಲ್ಲಿ ಆತ್ಮಹತ್ಯೆಯ ಸಾಧ್ಯತೆ, ಸಿದ್ದಾರ್ಥ ಅವರ ಸಾವು ಹೇಗೆ ಸಂಭವಿಸಿದೆ ಎಂಬುದರ ಬಗ್ಗೆ ಉಲ್ಲೇಖವಿರಬಹುದು ಎಂದು ವೆನ್ಲಾಕ್ ಜಿಲ್ಲಾಸ್ಪತ್ರೆ ಅಧೀಕ್ಷಕಿ ರಾಜೇಶ್ವರಿ ದೇವಿ ತಿಳಿಸಿದ್ದಾರೆ.

ವೆನ್ಲಾಕ್‌ ಆಸ್ಪತ್ರೆಯ ಫೋರೆನ್ಸಿಕ್‌ ವಿಭಾಗದ ಡಾ. ರಶ್ಮಿ ಅವರು ಪ್ರಾಥಮಿಕ ವರದಿ ನೀಡಿದ್ದಾರೆ. ಮೃತದೇಹದ ಭಾಗಗಳನ್ನು ಹೆಚ್ಚಿನ ಪರೀಕ್ಷೆಗೆ ದಾವಣಗೆರೆಯ ವಿಧಿವಿಜ್ಞಾನ ಪ್ರಯೋಗಾಲಯ(ಫೋರೆನ್ಸಿಕ್‌ ರಿಪೋರ್ಟ್‌)ಕ್ಕೆ ಕಳುಹಿಸಲಾಗಿದ್ದು, 15 ದಿನದ ಬಳಿಕ ಸಾವಿನ ಸ್ಪಷ್ಟ ಕಾರಣ ತಿಳಿದುಬರಲಿದೆ.

ಕೆಫೆ ಕಾಫಿ ಡೇ ಮಾಲೀಕ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಅಳಿಯ ವಿ.ಜಿ. ಸಿದ್ಧಾರ್ಥ ಅವರು ಜು.29ರ ರಾತ್ರಿ 7ರಿಂದ 7.30ರ ಅವಧಿಯಲ್ಲಿ ಉಳ್ಳಾಲ ನೇತ್ರಾವತಿ ಸೇತುವೆ ಬಳಿ ನಾಪತ್ತೆಯಾಗಿದ್ದರು. ಸುಮಾರು 36 ಗಂಟೆಗಳ ಬಳಿಕ ಅವರ ಮೃತದೇಹ ಹೊಯ್ಗೆ ಬಜಾರ್‌ ಬಳಿಯ ಹಿನ್ನೀರಿನಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

http://karnatakanewsportal.com/coffeday-samstapaka-siddartha-mruthadeha-pathe/

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.