ಕೆ.ಎನ್.ಪಿ.ವಾರ್ತೆ,ಲಂಡನ್,ಜು.31;

ಭಾರತೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ಸಾಲ ಪಡೆದು, ಮರುಪಾವತಿ ಮಾಡದೇ ಲಂಡನ್ ಗೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮಾಡಿದ್ದು, ‘ನಾನು ವಿ.ಜಿ ಸಿದ್ದಾರ್ಥ ಅವರೊಂದಿಗೆ ಪರೋಕ್ಷವಾಗಿ ಸಂಬಂಧ ಹೊಂದಿದ್ದೇನೆ.

ಅವರೊಬ್ಬ ಒಳ್ಳೆಯ ವ್ಯಕ್ತಿ ಹಾಗೂ ಉತ್ತಮ ಉದ್ಯಮಿ. ಅವರ ಪತ್ರದಲ್ಲಿರೋ ಸಾರಾಂಶ ನೋಡಿ ನನ್ನ ಹೃದಯ ನುಚ್ಚುನಾರಾಯ್ತು. ಸರ್ಕಾರಿ ಏಜೆನ್ಸಿಗಳು ಹಾಗೂ ಬ್ಯಾಂಕ್ ಗಳು ಎಂಥವರನ್ನೂ ಹತಾಶೆಗೆ ದೂಡಿಬಿಡುತ್ತವೆ. ನಾನು ಸಂಪೂರ್ಣ ಸಾಲ ಮರುಪಾವತಿ ಮಾಡುತ್ತೇನೆ ಎಂದರೂ ನನಗೆ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಹೇಳಿದ್ದಾರೆ.

ಅಂತೆಯೇ ಮತ್ತೊಂದು ಟ್ವೀಟ್ ನಲ್ಲಿ ವಿದೇಶಗಳಲ್ಲಿ ಅಲ್ಲಿನ ಸರ್ಕಾರ ಮತ್ತು ಬ್ಯಾಂಕ್ ​ಗಳು ಸಾಲಗಾರರು ಮಾಡಿದ ಸಾಲ ತೀರಿಸುವಲ್ಲಿ ಸಹಾಯ ಮಾಡುತ್ತವೆ. ಆದರೆ ನನ್ನ ವಿಚಾರದಲ್ಲಿ ಇದು ತದ್ವಿರುದ್ಧವಾಗಿದೆ. ನಾನು ಸಾಲ ತೀರಿಸಲು ಮಾಡಿದ ಪ್ರತಿ ಪ್ರಯತ್ನದಲ್ಲೂ ಸರ್ಕಾರ ಮತ್ತು ಬ್ಯಾಂಕ್ ​ಗಳು ತಡೆಗೋಡೆಯಾಗಿ ನಿಂತಿವೆ ಎಂದು ಮಲ್ಯ ಟ್ವೀಟ್​ ಮಾಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.