ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.28;

ಕರ್ನಾಟಕ “ಸಿಂಗಂ” ಖ್ಯಾತಿಯ ಖಡಕ್ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿದ್ದ ಅಣ್ನಾಮಲೈ ಮಂಗಳವಾರ ರಾಜ್ಯ ಪೊಲೀಸ್​ ಮಹಾ ನಿರ್ದೇಶಕಿ ನೀಲಮಣಿ ಎನ್​ ರಾಜು ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅಣ್ಣಾಮಲೈ ಅಲ್ಲಿ ಸಾಕಷ್ಟು ಜನಪ್ರಿಯರಾಗಿದ್ದರು.
ತಮಿಳುನಾಡಿನ ಕರೂರು ಮೂಲದವರಾದ ಅಣ್ಣಾಮಲೈ 2011ನೇ ಬ್ಯಾಚ್‌ ಐಪಿಎಸ್‌ ಅಧಿಕಾರಿಯಾಗಿ ಪೋಲೀಸ್ ಸೇವೆಯಲ್ಲಿ ತೊಡಗಿದ್ದರು.

ಸಮಾಜ ಸೇವೆಯಲ್ಲಿ ಮತ್ತಷ್ಟು ತೊಡಗಿಸಿಕೊಳ್ಳುವ ಉದ್ದೇಶದಿಂದ ಅಣ್ಣಾಮಲೈ ರಾಜಕೀಯಕ್ಕೆ ಸೇರಲಿದ್ದಾರೆ ಎನ್ನಲಾಗಿದ್ದು, ತಮಿಳುನಾಡಿನಲ್ಲಿ ತಮ್ಮ ರಾಜಕೀಯ ಜೀವನ ಆರಂಭಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.