ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಮೇ.23;

ಕಲಬುರಗಿ ಲೋಕಸಭೆ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ ಎನಿಸಿದ್ದ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭಾರಿ ಆಘಾತ ಉಂಟಾಗಿದೆ. ಬಿಜೆಪಿಯ ಉಮೇಶ್ ಜಾಧವ್ ಅವರು ಖರ್ಗೆ ಅವರನ್ನು 50 ಸಾವಿರಕ್ಕೂ ಅಧಿಕ ಮತಗಳಿಂದ ಸೋಲಿಸಿ ಕಾಂಗ್ರೆಸ್‌ಗೆ ಮುಖಭಂಗ ಉಂಟುಮಾಡಿದ್ದಾರೆ.

ಒಮ್ಮೆಯೂ ಸೋಲು ಕಾಣದ ಮಲ್ಲಿಕಾರ್ಜುನ ಖರ್ಗೆ, ವಿರೋಧಪಕ್ಷದ ನಾಯಕನಾಗಿದ್ದರು. ಉತ್ತರ ಕರ್ನಾಟಕದ ಭಾಗಗಳಲ್ಲಿ ವ್ಯಾಪಕ ಪ್ರಭಾವಳಿ ಹೊಂದಿರುವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉಮೇಶ್ ಜಾಧವ್ ಸುಲಭದ ತುತ್ತಾಗಲಿದ್ದಾರೆ ಎಂದು ಭಾವಿಸಲಾಗಿತ್ತು. ಆದರೆ, ಮೋದಿ ಅಲೆ ಜಾಧವ್ ಅವರ ಕೈ ಹಿಡಿದಿದೆ ಎನ್ನಲಾಗಿದೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ಶಾಸಕ ಸ್ಥಾನ ತ್ಯಜಿಸಿ ಬಿಜೆಪಿ ಸೇರಿದ್ದ ಉಮೇಶ್ ಜಾಧವ್ ಅವರಿಗೆ ಲೋಕಸಭೆ ಟಿಕೆಟ್ ನೀಡಲಾಗಿತ್ತು. ಖರ್ಗೆ ಅವರಂತಹ ಘಟಾನುಘಟಿ ನಾಯಕರ ಎದುರು ಉಮೇಶ್ ಜಾಧವ್ ಗೆಲುವು ಅಸಾಧ್ಯ ಎಂದೇ ಭಾವಿಸಲಾಗಿತ್ತು. ಅಲ್ಲದೆ, ಸ್ಥಳೀಯ ಬಿಜೆಪಿ ನಾಯಕರ ಅಸಮಾಧಾನ ಕೂಡ ಅವರಿಗೆ ಎರವಾಗಲಿದೆ ಎನ್ನಲಾಗಿತ್ತು. ಈ ಲೆಕ್ಕಾಚಾರಗಳೆಲ್ಲ ತಲೆಕೆಳಗಾಗಿದೆ.

2014ರ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿಯ ರೇವೂ ನಾಯಕ್ ಬೆಳಮಗಿ ಅವರನ್ನು 74,733 ಮತಗಳಿಂದ ಸೋಲಿಸಿದ್ದರು. 1972 ರಿಂದ 2009ರವರೆಗೂ ಸತತವಾಗಿ ಹತ್ತು ಬಾರಿ ವಿಧಾನಸಭಾ ಚುನಾವಣೆಗಳಲ್ಲಿ ಗೆದ್ದು ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.