ಕೆ.ಎನ್.ಪಿ.ವಾರ್ತೆ,ನವದೆಹಲಿ,ನ.25;

ಮಹಾರಾಷ್ಟ್ರ ಸರ್ಕಾರ ರಚನೆ ಬಿಕ್ಕಟ್ಟಿನ ಕುರಿತು ಸೋಮವಾರ ವಿಚಾರಣೆ ಮುಂದುವರಿಸಿದ ಸುಪ್ರೀಂಕೋರ್ಟ್ ನಾಳೆಗೆ ತೀರ್ಪು ಕಾಯ್ದಿರಿಸಿದೆ.

ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆಯನ್ನು ಇಂದು ಬೆಳಗ್ಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಎನ್ ವಿ ರಮಣ, ಅಶೋಕ್ ಭೂಷಣ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ನಾಳೆ ಬೆಳಗ್ಗೆ 10.30ಕ್ಕೆ ತೀರ್ಪನ್ನು ಕಾಯ್ದಿರಿಸಿದೆ.

ಮಹಾ ಸರ್ಕಾರ ರಚನೆ ಕುರಿತ ಮಹಾಡ್ರಾಮಾ ಇಂದು ಕೂಡ ಮುಂದುವರಿದಿದ್ದು ನ್ಯಾಯಾಲಯದಲ್ಲಿ ಹಿರಿಯ ವಕೀಲರು ವಾದ-ಪ್ರತಿವಾದಗಳನ್ನು ನಡೆಸಿದರು.

ವಾದ ಆಲಿಸಿದ ಸುಪ್ರೀಂಕೋರ್ಟ್‌ ನಾಳೆಗೆ ಆದೇಶವನ್ನು ಕಾಯ್ದಿರಿಸಿದೆ. ನಾಳೆ ಬೆಳಿಗ್ಗೆ 10:30 ಕ್ಕೆ ಆದೇಶ ಹೊರಬೀಳಲಿದೆ.

ಆತುರಾತರವಾಗಿ ರಚಿಸಲ್ಪಟ್ಟ ಮಹಾರಾಷ್ಟ್ರ ಸರ್ಕಾರದ ಅಳಿವು-ಉಳಿವು ನಾಳೆ ಸುಪ್ರೀಂಕೋರ್ಟ್‌ನಲ್ಲಿ ತೀರ್ಮಾನವಾಗಲಿದೆ. ಮಹಾರಾಷ್ಟ್ರ ಸರ್ಕಾರ ರಚನೆಯು ಅಸಾಂವಿಧಾನಿಕವಾಗಿ, ಅಧಿಕಾರ ದುರುಪಯೋಗದಿಂದ, ಮೋಸದಿಂದ ನಡೆದಿದೆ ಎಂದು ಆರೋಪಿಸಿ ಎನ್‌ಸಿಪಿ-ಕಾಂಗ್ರೆಸ್-ಶಿವಸೇನಾ ಪಕ್ಷಗಳು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದವು. ಅದರಂತೆ ಸುಧೀರ್ಘ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ನಾಳೆಗೆ ತೀರ್ಪು ಕಾಯ್ದಿರಿಸಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.