ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಜು.25;

ವಿಶೇಷವಾಗಿ ಸ್ವಚ್ಛತಾ ಸಪ್ತಾಹದ ಕಾರ್ಯಕ್ರಮದಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮುಸ್ಟೂರಿನ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯ ಮಾಡಲಾಯಿತು.

ಸ್ವಚ್ಛತಾ ಸಪ್ತಾಹದಲ್ಲಿ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತರು ಶೌಚಾಲಯದ ಕುರಿತು ಜನಜಾಗೃತಿ ಮೂಡಿಸಿದರು. ಗ್ರಾಮದಲ್ಲಿ ಎಲ್ಲರೂ ಶೌಚಾಲಯವನ್ನು ಬಳಸುವಂತೆ ಮನವೊಲಿಸಿದರು.

ಸ್ವಚ್ಛತಾ ಸಪ್ತಾಹ

ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳನ್ನಾಗಿ ಮಾಡಲು ತಾವುಗಳು ಪ್ರಾಮಾಣಿಕ ಪ್ರಯತ್ನವನ್ನು ಮಾಡಿ. ಅದರಿಂದ ಹರಡುವ ರೋಗಗಳನ್ನು ತಡೆಯುವಲ್ಲಿ ನಾವು ಯಶಸ್ವಿಯಾಗುತ್ತೇವೆ. ಎಲ್ಲರೂ ಆತ್ಮವಿಶ್ವಾಸದಿಂದ ಶೌಚಾಲಯ ಬಳಸಿ ಸ್ವಚ್ಛಂದ ಪರಿಸರ, ಸ್ವಚ್ಛಂದ ಗ್ರಾಮಗಳನ್ನಾಗಿ ಮಾಡಲು ನಾವುಗಳು ಬಹಿರ್ದೆಸೆ ಹೋಗದಂತೆ ತಡೆಯುವ ಆಂದೋಲನವನ್ನು ಪ್ರಾರಂಭಿಸುತ್ತಿದ್ದೇವೆ.

ಟೈಫೈಡ್, ಕಾಮಾಲೆ ರೋಗ ಮತ್ತು ಪೋಲಿಯೋ, ಕರುಳು ಬೇನೆ ಹಾಗೂ ಜಂತು ಹುಳು, ವಾಂತಿ ಭೇದಿ ತರನಾದ ಹಲವಾರು ರೋಗಗಳು ಸ್ವಚ್ಛತೆ ಇಲ್ಲದಿರುವುದರಿಂದ ಕಾಣಿಸಿಕೊಳ್ಳುತ್ತವೆ. ಈ ನಿಟ್ಟಿನಲ್ಲಿ ಎಲ್ಲರೂ ಶೌಚಾಲಯಗಳನ್ನು ಬಳಸುವುದು ಮತ್ತು ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿ ಡಾ ಭರತ್ ಕುಮಾರ್ ಮತ್ತು ಪ್ರಭಾರಿ ಹಿರಿಯ ಆರೋಗ್ಯ ಸಹಾಯಕ ಗುರುರಾಜ ಹಿರೇಮಠ ಕಾರ್ಯಕ್ರಮವನ್ನು ಉದ್ದೇಶಿಸಿ ಜನಜಾಗೃತಿ ಮೂಡಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಸಹಾಯಕರಾದ ತಮ್ಮಣ್ಣ ಬಸವರಾಜ್, ಆರೋಗ್ಯ ಸಹಾಯಕಿಯರಾದ ಮಂಜುಳಾ, ಯಲ್ಲಮ್ಮ, ಸುನೀತಾ, ಔಷಧ ವಿತರಕರಾದ ಗುರಣ್ಣ ಹಾಗೂ ನಿಂಗಣ್ಣ ಶುಶ್ರೂಷಕರು ಸೇರಿದಂತೆ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿಜ್ಞೆ ಮಾಡಿದರು.

ವರದಿ : ಹನುಮೇಶ್ ಡಣಾಪುರ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.