ಕೆ.ಎನ್.ಪಿ.ವಾರ್ತೆ,ಇಸ್ಲಾಮಾಬಾದ್,ಅ.31;

ಪಾಕಿಸ್ತಾನದ ಕರಾಚಿ-ರಾವಲ್ಪಿಂಡಿ ತೇಜ್ಗಮ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದ್ದು, 65 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದು, 13 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಆದರೆ, ಈವರೆಗೆ ರೈಲಿನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನೆಂಬುದರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.

ಮೂಲಗಳ ಪ್ರಕಾರ, ಪಾಕಿಸ್ತಾನದ ಕರಾಚಿ-ರಾವಲ್ಪಿಂಡಿ ತೇಜ್ಗಮ್ ಎಕ್ಸ್‌ಪ್ರೆಸ್ ಗುರುವಾರ ಬೆಳಿಗ್ಗೆ ರಹೀಂ ಯಾರ್ ಖಾನ್ ರೈಲ್ವೆ ನಿಲ್ದಾಣದ ಬಳಿಯ ಲಿಯಾಕತ್‌ಪುರಕ್ಕೆ ತಲುಪಿದ ಸಂದರ್ಭದಲ್ಲಿ ರೈಲಿನ ಬೋಗಿಯೊಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಈ ಬೆಂಕಿ ಎಷ್ಟು ವೇಗವಾಗಿ ಹರಡಿತು ಎಂದರೆ ಪ್ರಯಾಣಿಕರಿಗೆ ತಪ್ಪಿಸಿಕೊಳ್ಳಲು ಸಹ ಅವಕಾಶ ಸಿಗಲಿಲ್ಲ. ಈ ಅಪಘಾತ ಸಂಭವಿಸಿದ ಸಮಯದಲ್ಲಿ ಪ್ರಯಾಣಿಕರು ರೈಲಿನಲ್ಲಿ ಮಲಗಿದ್ದರು ಎಂದು ಹೇಳಲಾಗುತ್ತಿದೆ.

ಬೆಂಕಿಯಿಂದ ಈವರೆಗೆ 65 ಜನರು ಸಾವನ್ನಪ್ಪಿದ್ದರೆ, 13 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸಾವಿನ ಸಂಖ್ಯೆ ಇನ್ನೂ ಏರಿಕೆಯಾಗುವ ಸಾಧ್ಯತೆ ಇದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.