ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಆ.13;

ತುಂಗಭದ್ರಾ ಜಲಾಶಯ ಒಡೆದಿಲ್ಲ. ಗ್ರಾಮಸ್ಥರು ಆತಂಕಪಡುವ ಅಗತ್ಯವಿಲ್ಲ ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯ ಒಡೆದಿಲ್ಲ. ತುಂಗಭದ್ರಾ ಎಡದಂಡೆ ಮುಖ್ಯಕಾಲುವೆ ಒಡೆದಿದ್ದರಿಂದ ಅಲ್ಪ ಪ್ರಮಾಣದ ನೀರು ಪೋಲಾಗುತ್ತಿದೆ. ಪಂಪಾವನ ಜಲಾಶಯದ ಪಕ್ಕದಲ್ಲಿರುವುದರಿಂದ ಜಲಾವೃತಗೊಂಡಿದೆ. ಜಲಾಶಯದ ಇಂಜನಿಯರ್ ಅದನ್ನು ಸರಿಪಡಿಸುತ್ತಾರೆ. ಜಲಾಶಯ ಒಡೆದಿದೆ ಎನ್ನುವುದು ಶುದ್ಧ ಸುಳ್ಳು. ಈ ಬಗ್ಗೆ ಜನರು ಆತಂಕಕ್ಕೊಳಗಾಗಬಾರದು ಎಂದು ತಿಳಿಸಿದರು.

ಜಲಾಶಯ ಒಡೆದಿದೆ ಎಂಬ ವದಂತಿಯೊಂದು ಹಬ್ಬಿದ ಹಿನ್ನೆಲೆಯಲ್ಲಿ ನದಿ ತೀರದ ಬಂಡಿಹರ್ಲಾಪುರ, ಸಣಾಪುರ, ಹನುಮನಹಳ್ಳಿ, ಅಗಳಕೇರ, ಶಿವಪುರ ಗ್ರಾಮಸ್ಥರು ಆತಂಕ್ಕೀಡಾಗಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಖಾಸಗಿ ಶಾಲಾ- ಕಾಲೇಜುಗಳಿಗೆ ದಿಢೀರ್ ರಜೆ ಘೋಷಿಸಲಾಗಿತ್ತು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.