ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.09;

ಟಿಪ್ಪು ಜಯಂತಿ ಕಾರ್ಯಕ್ರಮದಿಂದ ದೂರ ಉಳಿಯಲು ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದಾರೆ. 

ನವೆಂಬರ್ 10ರಂದು ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಟಿಪ್ಪು ಜಯಂತಿಗೆ ಕಾಂಗ್ರೆಸ್ ನಾಯಕರುಗಳೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬದಲಿಗೆ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ ಉದ್ಘಾಟನೆ ಮಾಡಲಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಅವರು ಟಿಪ್ಪು ಜಯಂತಿ ಕುರಿತ ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮದಿಂದ ದೂರ ಉಳಿಯುವ ಸಾಧ್ಯತೆಗಳು ಹೆಚ್ಚಿವೆ. ನಾಳೆ ಆಯೋಜಿಸಿರುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೆಸರು ಪ್ರಕಟಿಸಲಾಗಿಲ್ಲ.

ಇತ್ತೀಚೆಗೆ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಿಂದಲೂ ಕುಮಾರಸ್ವಾಮಿ ಹಾಗೂ ಹೆಚ್‌ಡಿ ದೇವೇಗೌಡರು ದೂರ ಉಳಿದಿದ್ದರು ಇದು ವ್ಯಾಪಕ ಟೀಕೆಗೆ ಕಾರಣವಾಗಿತ್ತು. ಅಷ್ಟೇ ಅಲ್ಲದೆ ವಿಧಾನಸೌಧ ಎದುರು ವಾಲ್ಮೀಕಿ ನಾಯಕರು ಪ್ರತಿಭಟನೆಯನ್ನೂ ಕೂಡ ನಡೆಸಿದ್ದರು.

ಆಮಂತ್ರಣ ಪತ್ರಿಕೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೆಸರಿಲ್ಲ…

ಟಿಪ್ಪು ಸುಲ್ತಾನ್‌ ಜಯಂತಿ ಆಚರಣೆ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆಯಾಗಿದ್ದು, ಈಗಾಗಲೇ ರಾಜಕೀಯ ಮುಖಂಡರುಗಳಿಗೆ ಆಮಂತ್ರಣ ಪತ್ರಿಕೆಯನ್ನು ಕಳುಹಿಸಲಾಗಿದೆ. ಅದರಲ್ಲಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರ ಹೆಸರು ಎಲ್ಲೂ ಕಾಣುತ್ತಿಲ್ಲ. ಹಾಗಾಗಿ ಅವರು ಟಿಪ್ಪು ಜಯಂತಿಗೆ ಬರುವುದಿಲ್ಲ ಎನ್ನುವ ವಿಚಾರ ಬಹಿರಂಗಗೊಂಡಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.