ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.03;

ಕರ್ನಾಟಕದ 17 ಶಾಸಕರು ಅನರ್ಹಗೊಂಡಿದ್ದು, 15 ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಮತದಾನ ನಡೆಯುತ್ತಿದೆ. ಮತದಾನಕ್ಕೆ 2 ದಿನಗಳು ಬಾಕಿ ಇರುವಾಗ ಅನರ್ಹರನ್ನು ಸೋಲಿಸಿ ಎಂಬ ಟ್ವಿಟರ್ ಅಭಿಯಾನವನ್ನು ಕೈಗೊಳ್ಳಲಾಗಿದೆ.

ಡಿಸೆಂಬರ್ 3ರ ಮಂಗಳವಾರ ಮಧ್ಯಾಹ್ನ ‘ಅನರ್ಹರನ್ನು ಸೋಲಿಸಿ ಕರ್ನಾಟಕದ ಗೌರವ ಉಳಿಸಿ’ ಎಂಬ ಶೀರ್ಷಿಕೆಯಡಿ ಟ್ವಿಟರ್ ಅಭಿಯಾನ ಕೈಗೊಳ್ಳಲಾಗಿದೆ. ಜನರು ಟ್ವೀಟ್ ಮಾಡುವ ಮೂಲಕ ಅಭಿಯಾನಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಹಲವು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಟ್ವಿಟರ್‌ನಲ್ಲಿ ಈ ಅಭಿಯಾನಕ್ಕೆ ಬೆಂಬಲ ನೀಡಿದ್ದಾರೆ. ಈ ಮೂಲಕ ಅಭಿಯಾನವನ್ನು ಯಶಸ್ವಿಯಾಗಿಸಲು ಕೈ ಜೋಡಿಸಿದ್ದಾರೆ. 

ಹ್ಯಾಷ್ ಟ್ಯಾಗ್ ಬಳಸಿ ಟ್ವೀಟ್ ಮಾಡಿ

‘ಅನರ್ಹರನ್ನು ಸೋಲಿಸಿ ಕರ್ನಾಟಕದ ಗೌರವ ಉಳಿಸಿ’ ಎಂಬ ಶೀರ್ಷಿಕೆಯಡಿ ಟ್ವಿಟರ್ ಅಭಿಯಾನ ನಡೆಯುತ್ತಿದೆ.

ಆಸಕ್ತರು #RejectDisqualifiedMLAs ಮತ್ತು ಅನರ್ಹ ಶಾಸಕರನ್ನು ತಿರಸ್ಕರಿಸಿ ಎಂಬ ಹ್ಯಾಷ್ ಟ್ಯಾಗ್ ಬಳಸಿ ಜನರು ಟ್ವೀಟ್ ಮಾಡಬಹುದಾಗಿದೆ.

ಪ್ರಜ್ವಲ್ ರೇವಣ್ಣ ಮನವಿ

ಹಾಸನ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಈ ಕುರಿತು ಫೇಸ್‌ಬುಕ್‌ನಲ್ಲಿ ಫೋಸ್ಟ್ ಹಾಕಿದ್ದಾರೆ.

“ಹಣ-ಅಧಿಕಾರದ ಆಸೆಗಾಗಿ ತಮ್ಮನ್ನು ಮಾರಿಕೊಂಡು ರಾಜ್ಯದ ಅಭಿವೃದ್ದಿಗೆ ಬಳಕೆಯಾಗಬೇಕಾಗಿದ್ದ ತೆರಿಗೆದಾರರ ಹಣ ಚುನಾವಣೆಗೆ ಪೋಲಾಗುವಂತೆ ಮಾಡಿದ ಅನರ್ಹ ಶಾಸಕರನ್ನು ಡಿ.5 ರಂದು ನಡೆಯುವ ಉಪಚುನಾವಣೆಯಲ್ಲಿ ಸೋಲಿಸಿ ಕನ್ನಡಿಗರು ಸ್ವಾಭಿಮಾನ ಮೆರೆಯಬೇಕೆಂದು ವಿನಂತಿ” ಎಂದು ಮನವಿ ಮಾಡಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಮನವಿ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪುತ್ರ, ವರುಣಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಹ ಅಭಿಯಾನಕ್ಕೆ ಬೆಂಬಲ ಸೂಚಿಸಿ ಟ್ವಿಟ್ ಮಾಡಿದ್ದಾರೆ.

ಈ ಬಾರಿ ಅನರ್ಹರು ಮತ್ತೆ ಚುನಾಯಿತರಾದರೆ ಕನ್ನಡ ನಾಡಿಗೆ ಬಹುದೊಡ್ಡ ಕಳಂಕ. ಸ್ವಾಭಿಮಾನದ ಪತನ. ನಾನು ಅಭಿಯಾನದ ಭಾಗವಾಗುವೆ. ನೀವೂ ಭಾಗವಹಿಸಿ ಎಂದು ಕರೆ ಕೊಟ್ಟಿದ್ದಾರೆ.

ಅನರ್ಹ ಅಭ್ಯರ್ಥಿಗಳನ್ನು ಸೋಲಿಸಿ ಕರ್ನಾಟಕದ ಅರ್ಧದಷ್ಟು ನೆರೆ ಬಂದು ಜನ ಸಂಕಷ್ಟದಲ್ಲಿದ್ದಾಗ ಬಾಂಬೆಯ ಹೋಟೆಲ್‌ನಲ್ಲಿ ಮಜಾ ಮಾಡುತ್ತಿದ್ದ ಅನರ್ಹ ಅಭ್ಯರ್ಥಿಗಳನ್ನು ಉಪ ಚುನಾವಣೆಯಲ್ಲಿ ಸೋಲಿಸಿ ಎಂದು ಕರೆ ನೀಡಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.