ಕೆ.ಎನ್.ಪಿ.ವಾರ್ತೆ,ವಿಜಯಪುರ,ಡಿ.11;

ಕೆರೆಯಲ್ಲಿ ಈಜಾಡಲು ಹೋಗಿ ನೀರುಪಾಲಾಗಿದ್ದ ಇಬ್ಬರು ಬಾಲಕರು ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ.

ಜಿಲ್ಲೆಯ ಬಸವನಬಾಗೆವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುದೀಪ್ (10) ಹಾಗೂ ಮಾಳಪ್ಪ (10) ಮೃತ ದುರ್ದೈವಿಗಳು.

ಮಂಗಳವಾರ ಸಂಜೆ ಬಾಲಕರು ಕೆರೆಯಲ್ಲಿ ಈಜಲು ತೆರಳಿದಾಗ ನೀರು ಪಾರಾಗಿದ್ದರು. ಇಂದು ಇಬ್ಬರ ಮೃತದೇಹಗಳು ಪತ್ತೆಯಾಗಿದೆ.

ಮೃತ ಬಾಲಕರ ಕುಟುಂಬದಲ್ಲೀಗ ನೀರವ ಮೌನ ಆವರಿಸಿದೆ. ಕುಟುಂಬಸ್ಥರ ಪಾಲಿಗೆ ಮಕ್ಕಳ ಸಾವಿನ ದುರಂತ ದೊಡ್ಡ ಆಘಾತವೇ ತಂದೊಡ್ಡಿದೆ. ಘಟನೆ ಸಂಬಂಧ ಬಸವನಬಾಗೇವಾಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.