ಕೆ.ಎನ್.ಪಿ.ವಾರ್ತೆ,ಮಂಗಳೂರು,ನ.14;

ಅಯೋಧ್ಯೆ ರಾಮ ದೇವಾಲಯ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಟ್ರಸ್ಟ್ ನಿರ್ಮಿಸಬೇಕೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಉಡುಪಿಯ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿಗಳನ್ನು ಟ್ರಸ್ಟ್ ಗೆ ನೇಮಕ ಮಾಡಲಾಗುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ನ ಮೂಲಗಳು ತಿಳಿಸಿವೆ.

ರಾಮ ಜನ್ಮಭೂಮಿ ಹೋರಾಟದಲ್ಲಿ ಪೇಜಾವರ ಶ್ರೀಗಳು ಪ್ರಮುಖ ಪಾತ್ರ ವಹಿಸಿದ್ದರು. ವೈಷ್ಣವ ಪಂಥದ ಪ್ರಮುಖ ಶ್ರೀಗಳಾಗಿದ್ದಾರೆ, ಜೊತೆಗೆ ದಕ್ಷಿಣ ಭಾರತದಲ್ಲಿ ಪ್ರಮುಖ ಸ್ವಾಮೀಜಿಗಳಲ್ಲಿ ಒಬ್ಬರಾಗಿರುವ ಕಾರಣ ಅವರನ್ನು ಅಯೋಧ್ಯೆ ರಾಮ ದೇವಾಲಯ ನಿರ್ಮಾಣದ ಟ್ರಸ್ಟ್ ಗೆ ನೇಮಕ ಮಾಡಲಾಗುವುದೆಂದು ಹೇಳಲಾಗುತ್ತಿದೆ.

ಇನ್ನೂ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಪೇಜಾವರ ಶ್ರೀಗಳ ಆಪ್ತ ಸಹಾಯಕ ಸುಬ್ರಮಣ್ಯ, ಶ್ರೀಗಳನ್ನು ಟ್ರಸ್ಟ್ ಗೆ ನೇಮಕ ಮಾಡುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್ | ರಾಮಲಲ್ಲಾಗೆ ಮಂದಿರ ನಿರ್ಮಾಣದ ಹಕ್ಕಿಲ್ಲ ಸುಪ್ರೀಂ

ಅಯೋಧ್ಯೆ ರಾಮನ ಪಾಲು : ಮಂದಿರ ನಿರ್ಮಾಣಕ್ಕೆ ‘ಸುಪ್ರೀಂ’ ವಿಧಿಸಿದ ಷರತ್ತುಗಳೇನು?

ಅಯೋಧ್ಯೆ ತೀರ್ಪು | ರಾಮಜನ್ಮಭೂಮಿ-ಬಾಬ್ರಿ ಮಸೀದಿ | ಅಲ್ಲಿ ನಡೆದದ್ದೇನು? | ಸಂಪೂರ್ಣ ವರದಿ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.