ಕೆ.ಎನ್.ಪಿ.ವಾರ್ತೆ,ಹುಬ್ಬಳ್ಳಿ,ಏ.28;

ಕಳೆದ ಕೆಲ ದಿನಗಳಿಂದ ಉತ್ತರ ಕರ್ನಾಟಕದಲ್ಲಿ ಬಿಸಿಲಿನ ತಾಪ ತಾರಕಕ್ಕೇರಿದ್ದು 40 ಡಿಗ್ರಿ ಸೆಲ್ಸಿಯಸ್ ಗಿಂತ ಅಧಿಕವಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಸಲಹೆಗಾರರ ಪ್ರಕಾರ, ಮುಂದಿನ ದಿನಗಳಲ್ಲಿ ತಾಪಮಾನ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಆದರೆ ಭಾರತೀಯ ಹವಾಮಾನ ಇಲಾಖೆ ಹೇಳುವ ಪ್ರಕಾರ ಏಪ್ರಿಲ್ 30ರ ನಂತರ ತಾಪಮಾನ ಕಡಿಮೆಯಾಗಲಿದೆ.

ಸರಾಸರಿಗಿಂತ ಗರಿಷ್ಠ ಮಟ್ಟಕ್ಕೆ ತಾಪಮಾನ ತಲುಪಿದಾಗ ಉಷ್ಣ ಗಾಳಿ ಬೀಸುತ್ತದೆ. ನಿನ್ನೆ ಕಲಬುರಗಿಯಲ್ಲಿ 43.3 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ 42 ಡಿಗ್ರಿ ಸೆಲ್ಸಿಯಸ್, ಹಾವೇರಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ದಾಖಲಾಗಿದೆ.

ಮುಂದಿನ ಮೂರು ದಿನಗಳ ಕಾಲ ಉತ್ತರ ಕರ್ನಾಟಕದಲ್ಲಿ ಗರಿಷ್ಠ ಉಷ್ಣಾಂಶ 3-4 ಡಿಗ್ರಿ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಗಾವಿ, ವಿಜಯಪುರ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಯಾದಗಿರಿ, ಬಳ್ಳಾರಿ, ಹಾವೇರಿ, ಕೊಪ್ಪಳ ಮತ್ತು ರಾಯಚೂರಿನಲ್ಲಿ ಮುಂದಿನ ಮೂರು ದಿನಗಳಲ್ಲಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗಲಿದೆ.

ಏ.30ರ ಬಳಿಕ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಹಾಗೊಂದೊಮ್ಮೆ ಮಳೆ ಬಂದರೆ ಮಾತ್ರ ತಾಪಮಾನ ಕೊಂಚ ಕಡಿಮೆಯಾಗಲಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.