ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜೂ.02;
ರೈತರ ಸಾಲ ಮನ್ನಾ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ವಚನ ಭ್ರಷ್ಟರಾಗಿದ್ದಾರೆ. ಅಧಿಕಾರಕ್ಕೂ ಮುನ್ನ ಒಂದು ಮಾತು ಅಧಿಕಾರವಿದ್ದಾಗ ಒಂದು ಮಾತನ್ನು ಆಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿಗೆ ಎರಡು ನಾಲಿಗೆ ಇದೆ ಎಂದು ಶೀರಾಮುಲು ನೇರವಾಗಿ ಆರೋಪಿಸಿದ್ದಾರೆ.
ಗುರುವಾರ ಮೊಳಕಾಲ್ಮೂರ್ ಶಾಸಕ ಶ್ರೀರಾಮುಲು ಬಳ್ಳಾರಿ ನಗರದಲ್ಲಿರುವ ಅವರ ನಿವಾಸದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ, ರೈತರ ಸಾಲ ಮನ್ನಾ ಮಾಡುವಲ್ಲಿ ಹೆಚ್.ಡಿ.ಕುಮಾರಸ್ವಾಮಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಇವರೊಬ್ಬ ವಚನ ಭ್ರಷ್ಠ ಸಿಎಂ ಎಂದು ಆರೋಪಿಸಿದರು. ಕುಮಾರಸ್ವಾಮಿ ಅವರು ಸಂಪೂರ್ಣ ಸಾಲ ಮನ್ನಾ ಎಂದಿದ್ದವರು ಈಗ ರಾಗ ಬದಲಿಸಿದ್ದಾರೆ. ಇದು ಹೀಗೆ ಮುಂದುವರೆದರೆ ಈ ಸಮ್ಮಿಶ್ರ ಸರ್ಕಾರ ಕೆಲವೇ ದಿನಗಳಲ್ಲಿ ಬಿದ್ದು ಹೋಗಲಿದೆ ಎಂದರು.
ವರದಿ : ಟಿ.ಗಣೇಶ್
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ನೀವು ಕೂಡ ಬರೆಯಬಹುದು. ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
9513326661
ಈ-ವಿಳಾಸ : karnatakanewsportal@gmail.com