ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.23;
ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಹೂವು, ಹಣ್ಣು ತರಕಾರಿಗಳ ಬೆಲೆ ಗಗನಕ್ಕೇರಿದ್ದು, ಬೆಲೆ ಏರಿಕೆ ಬೆನ್ನಲ್ಲೂ ಹೂವು-ಹಣ್ಣು, ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿಯೇ ನಡೆದಿದೆ.
ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ ನಗರದ ಮಾರುಕಟ್ಟೆಯಲ್ಲಿ ಹೂವು-ಹಣ್ಣುಗಳ ದರ ಗಗನಕ್ಕೇರಿದ್ದು, ಹಬ್ಬಕ್ಕೆ ಬೇಕಾದ ಬಾಳೆಕಂಬ, ಮಾವಿನಸೊಪ್ಪು, ಕೇದಗೆ, ತಾವರೆ ಹೂವು, ಮಲ್ಲಿಗೆ ಸೇರಿದಂತೆ ಇತರೆ ಹೂವು, ತರಕಾರಿ, ಹಣ್ಣುಗಳ ಬೆಲೆಯಲ್ಲಿ ಏರಿಕೆಯಾಗಿದೆ.
ಏಲಕ್ಕಿ ಬಾಳೆ ಕೆಜಿಗೆ 80-90, ಸೇಬು 140-180, ಸೀಬೇಕಾಯಿ 60ರೂ, ಅನಾನಸ್ ಒಂದು ಹಣ್ಣಿಗೆ 50 ರೂ. ಸೀತಾಫಲ ಕೆಜಿಗೆ 100-150ರೂ.ಗಳಲ್ಲಿ ಮಾರಾಟ ಮಾಡಲಾಗುತ್ತಿದೆ.
ಗುಲಾಬಿ ಹೂವು 160-200 ರೂ, ಸೇವಂತಿಗೆ 150-200, ಮಲ್ಲಿಗೆ 300-400ರೂ, ತಾವರೆ ಹೂವು 80-100, ಚೆಂಡು ಹೂವು 40-50ರೂಗಳಿದೆ, ಆದರೂ ಜನರ ಖರೀದಿಯ ಉತ್ಸಾಹ ಕಿಂಚಿತ್ತೂ ಕುಸಿದಿಲ್ಲ.
ಲಕ್ಷ್ಮಿ ಹಬ್ಬಕ್ಕೆ ಹೂವು ಪ್ರಧಾನ ವಸ್ತುವಾದರೆ, ನಂತರದ ಆದ್ಯತೆ ಹಣ್ಣುಗಳಿಗೆ. ಹೀಗಾಗಿ ಹೂವು ದರ ಏರಿಕೆಯ ಜತೆಗೆ ಹಣ್ಣಿನ ದರವೂ ಏರಿಕೆಯಾಗಿದೆ. ದ್ರಾಕ್ಷಿ, ಸೇಬು, ಬಾಳೆಹಣ್ಣು, ಸೀಬೆ, ಸಪೋಟ, ಸೀತಾಫಲ ಹೀಗೆ ಎಲ್ಲಾ ಬಗೆಯ ಹಣ್ಣುಗಳ ಬೆಲೆಯೂ ಗಗನಕ್ಕೇರಿದೆ.
ಕೆಆರ್ ಮಾರುಕಟ್ಟೆ, ಮಲ್ಲೇಶ್ವರಂ, ಗಾಂಧಿಬಜಾರ್, ರಾಜಾಜಿನಗರ, ಚಾಮರಾಜಪೇಟೆ ಹೀಗೆ ನಗರದ ಬಹುತೇಕ ಮಾರುಕಟ್ಟೆಗಳಲ್ಲಿ ಹೂವು-ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಯ ಭರಾಟೆ ಜೋರಾಗಿದೆ.
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.