ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.06;

ನಟಿ, ಮಂಡ್ಯದ ನೂತನ ಸಂಸದೆ ಸುಮಲತಾ ಅಂಬರೀಶ್ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಅವರ ಸಂಚಿಕೆ ಇದೇ ವಾರ ಪ್ರಸಾರ ಆಗಲಿದೆ.

ವೀಕೆಂಡ್ ವಿತ್ ರಮೇಶ್ ಶೋನಲ್ಲಿ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಷ್ ಅವರು ಭಾಗಿಯಾಗಿರುವ ‘ವೀಕೆಂಡ್ ವಿತ್ ರಮೇಶ್ ಸಂಚಿಕೆ ಇದೇ ಶನಿವಾರ (ಮೇ 8, 2019) ರಂದು ಪ್ರಸಾರವಾಗಲಿದ್ದು, ಇವರ ಸಾಧನೆಯ ಕಥೆ ಕಾರ್ಯಕ್ರಮದಲ್ಲಿ ತೆರೆದುಕೊಳ್ಳಲಿದೆ.

ಇತ್ತೀಚಿಗಷ್ಟೆ ಮಂಡ್ಯದ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪ್ರಚಂಡ ಬಹುಮತದ ಮೂಲಕ ಗೆದ್ದು ‘ಸಂಸದೆ’ ಆಗಿರುವ ನಟಿ ಸುಮಲತಾ ಅವರು ಇದೀಗ ಕರ್ನಾಟಕದ ಮೆಚ್ಚಿನ ಮಹಿಳಾ ನಾಯಕಿಯೂ ಆಗಿ ಹೊರಹೊಮ್ಮಿದ್ದಾರೆ.

ತೆಲುಗಿನ ಚಿರಂಜೀವಿ, ಕನ್ನಡದ ಡಾ ವಿಷ್ಣುವರ್ಧನ್ ಸೇರಿದಂತೆ ಸೌತ್ ಇಂಡಿಯಾದ ಘಟಾನುಘಟಿ ಸ್ಟಾರ್ ನಟರೊಂದಿಗೆ ನಟಿಸಿರುವ ಸುಮಲತಾ ಅಂಬರೀಷ್ ಅವರು ಬಹಳಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡ ಸೇರಿದಂತೆ ತೆಲುಗು, ತಮಿಳು ಚಿತ್ರಗಳಲ್ಲಿ ನಟಿಸಿರುವ ಸುಮಲತಾ ದಕ್ಷಿಣ ಭಾರತದ ಬಹತೇಕ ಎಲ್ಲ ಸಿನಿಮಾ ಪ್ರಿಯರಿಗೆ ಗೊತ್ತಿರುವ ಸ್ಟಾರ್ ನಟಿ.

ಸುಮಲತಾ ಪತಿ, ದಿವಂಗತ ರೆಬಲ್ ಸ್ಟಾರ್ ಅಂಬರೀಷ್ ಅವರು ಸಹ ಕಳೆದ ಸೀಸನ್‌ನಲ್ಲಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.