ಕೆ.ಎನ್.ಪಿ.ವಾರ್ತೆ,ಬೀದರ್,ಜು.14;

ವಿದ್ಯುತ್ ಕಂಬಕ್ಕೆ ವ್ಯಕ್ತಿಯೋರ್ವನ ತಲೆ ಚಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ರವಿವಾರ ಬೆಳ್ಳಂ ಬೆಳಗ್ಗೆ ಬೀದರ್ ನ ಚಿಕ್ಕಪೇಟೆಯ ರಿಂಗ್ ರೋಡ್‍ ಹತ್ತಿರದಲ್ಲಿ ನಡೆದಿದೆ.

ಮೂಲತಃ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ ಗ್ರಾಮದ ನಿವಾಸಿ ಕಲ್ಲಪ್ಪ (28) ಕೊಲೆಯಾಗಿರುವ ದುರ್ದೈವಿ. ಜಿಲ್ಲೆಯ ಗಾಂಧಿಗಾಂಜ್ ನ ತಿರುಮಲ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಕಲ್ಲಪ್ಪ ಚಿಕ್ಕಪೇಟೆಯ ಸಂಬಂಧಿಕರ ಮನೆಯಲ್ಲಿ ನೆಲೆಸಿದ್ದ.

ನಸುಕಿನ ಜಾವ ಮನೆಯಿಂದ ಎದ್ದು ಹೋಗಿರುವಾಗ ದುಷ್ಕರ್ಮಿಗಳು ಕೊಲೆ ಮಾಡಿರಬಹುದೆಂದು ಶಂಕಿಸಲಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.

ಬೀದರ್ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ ಶ್ರೀಧರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.