ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಅ.22;

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕು ಹಿರೆಮಲ್ಲನಹೋಳೆ ಗೊಲ್ಲರಹಟ್ಟಿ ಗ್ರಾಮದ ಮಂಡಜ್ಜರು ಶಿವಣ್ಣ ಎಂಬುವರಿಗೆ ಸೇರಿದ ಎಮ್ಮೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದೆ.

ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ರಸ್ತೆಯ ಪಕ್ಕದಲ್ಲಿ ಇರುವ ಟ್ರಾನ್ಸ್ ಪಾರ್ಮರ್ ವೈರ್ ತಗುಲಿದ ಪರಿಣಾಮ ವಿದ್ಯುತ್ ಹರಿದು ಎಮ್ಮೆ ಸಾವನ್ನಪ್ಪಿದೆ.

ಅನೇಕ ಬಾರಿ ಗ್ರಾಮಸ್ಥರು ಬೆಸ್ಕಾಂ ಇಲಾಖೆಯ ಲೈನ್ ಮೆನ್ ಬಳಿ ವಿದ್ಯುತ್ ಸಮಸ್ಯೆ ಬಗ್ಗೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜನರು ಓಡಾಡುವ ರಸ್ತೆಯಾಗಿದ್ದು ದೊಡ್ಡ ಅವಘಡ ಸಂಭವಿಸುವ ಮುನ್ನ ಮುನ್ನೆಚ್ಚರಿಕೆ ವಹಿಸಿ ಕೂಡಲೆ ಕ್ರಮ ಕೈಗೊಳ್ಳಬೇಕು. ಎಮ್ಮೆ ಸಾಕಿದ್ದ ರೈತನಿಗೆ ಸೂಕ್ತ ಪರಿಹಾರ ಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ವರದಿ : ಮಹಮ್ಮದ್ ಅಬ್ದುಲ್ ರಖೀಬ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.