ಕೆ.ಎನ್.ಪಿ.ವಾರ್ತೆ,ವಿಜಯಪುರ,ಜೂ.07;

ವಿಶ್ವ ಪ್ರಸಿದ್ಧ ಗೋಳಗುಮ್ಮಟ ಹೊರ ವಿನ್ಯಾಸ ಶೀಘ್ರದಲ್ಲೇ ನವೀಕರಣಗೊಳ್ಳಲಿದೆ, ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಾಚ್ಯ ಸಂಶೋಧನಾ ಇಲಾಖೆ ಅಧಿಕಾರಿಗಳು ಹಣಕ್ಕಾಗಿ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

1 ಕೋಟಿ ರೂ ಹಣ ನೀಡುವಂತೆ ಏಪ್ರಿಲ್ ತಿಂಗಳಲ್ಲಿ ಮನವಿ ಸಲ್ಲಿಸಿದ್ದು, ಪ್ರಾಚ್ಯ ಸಂಶೋಧನಾ ಇಲಾಖೆಯ ತಜ್ಞರ ತಂಡ ಕೆಲ ದಿನಗಳ ಹಿಂದೆ ಗೋಲ್ ಗುಂಬಜ್ ಗೆ ಭೇಟಿ ನೀಡಿತ್ತು. ಏನೆಲ್ಲಾ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂಬ ಬಗ್ಗೆ ವರದಿ ಸಲ್ಲಿಸಿತ್ತು.

ಆ ವರದಿಯ ಆಧಾರದ ಮೇಲೆ ಅದಕ್ಕೆ ತಗಲುವ ವೆಚ್ಚವನ್ನು ಅಂದಾಜು ಮಾಡಿ ಮೇಲಾಧಿಕಾರಿಗಳಿಗೆ ನೀಡಿದ್ದು, ಆದಷ್ಟು ಬೇಗ ಇದಕ್ಕೆ ಅನುಮೋದನೆ ಸಿಗಲಿದೆ ಎಂದು ಹಿರಿಯ ಅಧಿಕಾರಿ ಮೌನೇಶ್ ಕುರಾವತ್ತಿ ತಿಳಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.