ಕೆ.ಎನ್.ಪಿ.ವಾರ್ತೆ,ಗಂಗಾವತಿ,ಜೂ.21;

ಗಂಗಾವತಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸ ಅಯೋಧ್ಯದಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.

ಈ ವೇಳೆ ಶಾಲಾ ಆವರಣದಲ್ಲಿ ಮಕ್ಕಳಿಗೆ ಶಿಕ್ಷಕರಾದ ಮಂಜು ಎಂ ಟಿ ಯೋಗವನ್ನು ಹೇಳಿಕೊಟ್ಟರು. ಮುಖ್ಯಗುರುಗಳಾದ ಮಲ್ಲಿಕಾರ್ಜುನ ಸ್ವಾಮಿ ಇವರು ವಿಶ್ವಕ್ಕೆ ಯೋಗ ಕೊಡುಗೆಯನ್ನು ನೀಡಿದ ಭಾರತವನ್ನು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಶಿಕ್ಷಕರಾದ ಶರಣಬಸವರಾಜರು ಮಾತನಾಡಿ, ಇಂದು 5 ನೇ ವಿಶ್ವ ಯೋಗ ದಿನ. ವಿಶ್ವಕ್ಕೆ ಭಾರತವು ಯೋಗದ ಕೊಡುಗೆ ನೀಡಿದೆ, ಯೋಗವು, ಭೌತಿಕ, ಮಾನಸಿಕ, ಮತ್ತು ಆಧ್ಯಾತ್ಮಕ ಅಭ್ಯಾಸವಾಗಿದೆ. ವಿಶ್ವ ಯೋಗ ದಿನಾಚರಣೆಯನ್ನು 180ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಆಚರಿಸಲಾಗುತ್ತಿದೆ ಎಂಬ ಮಾಹಿತಿ ನೀಡಿದರು.

ಅಂತರಾಷ್ಟ್ರೀಯ ಯೋಗ ದಿನದ ಮಹತ್ವ ಕುರಿತು ಶಿಕ್ಷಕರಾದ ಕನಕರಾಯ ರಾಟಿ ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಮಂಜುನಾಥ ಎಂ ಪ್ರಾಣಯಾಮ ಯೋಗ ಹಾಗೂ ಧ್ಯಾನದ ಮಹತ್ವ ಕುರಿತು ತಿಳಿಸಿದರು. ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರು ಅಡುಗೆ ಸಿಬ್ಬಂದಿಯವರು ಕೂಡ ಹಾಜರಿದ್ದರು.

ವರದಿ : ಹನುಮೇಶ್ ಭಾವಿಕಟ್ಟಿ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.