ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.27;

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡ ನಂತರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ವಿಶ್ವಾಸ ಮತಯಾಚನೆ ಮಾಡಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 29 ಮತ್ತು 30ರಂದು ವಿಧಾನಸೌಧ ಸುತ್ತಮುತ್ತ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮಂಗಳವಾರ ಮಧ್ಯಾಹ್ನ 12 ಗಂಟೆವರೆಗೂ ನಿಷೇಧಾಜ್ಞೆ ಮುಂದುವರಿಯಲಿದೆ. ಸೆಕ್ಷನ್ 144 ಅಡಿಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿಷೇಧಾಜ್ಞೆ ಜಾರಿಗೊಳಿಸುತ್ತಿರುವುದಾಗಿ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಅವರು ತಿಳಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.