ಕೆ.ಎನ್.ಪಿ.ವಾರ್ತೆ,ವಿಜಯವಾಡ,ಜೂ.19;

ಅಪರಿಚಿತ ದುಷ್ಕರ್ಮಿಗಳು 70 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬ್ಲೇಡ್ ನಿಂದ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಮಂಗಳವಾರ ರಾತ್ರಿ ಅಂಧ್ರ ಪ್ರದೇಶದ ವಿಜಯವಾಡ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ರಸ್ತೆ ಅಪಘಾತದಲ್ಲಿ ಪತಿ ನಿಧನವಾದ ನಂತರ ವಿಜಯವಾಡದಲ್ಲಿ ವಾಸಿಸುತ್ತಿದ್ದ ಈ ವೃದ್ಧೆ ರೈಲ್ವೆ ನಿಲ್ದಾಣದ ಸಮೀಪಿ ಮೀನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದಾರೆ.

ನಿನ್ನೆ ತಡರಾತ್ರಿ ನೈರ್ಮಲ್ಯ ಕಾರ್ಮಿಕರು ಪ್ಲಾಟ್ ಫಾರ್ಮ್ ಸ್ವಚ್ಛಗೊಳಿಸುತ್ತಿದ್ದ ವೇಳೆ, ಪ್ಲಾಟ್ ಫಾರ್ಮ್ 8ರ ಬಳಿ ವೃದ್ಧೆ ರಕ್ತದ ಮಡುವಿನಲ್ಲಿ ಬೆತ್ತಲೆಯಾಗಿ ಬಿದ್ದಿರುವುದನ್ನು ಗಮನಿಸಿ, ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ವೃದ್ಧೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಕುತ್ತಿಗೆ, ಎದೆ ಹಾಗೂ ಖಾಸಗಿ ಭಾಗದಲ್ಲಿ ಗಾಯಗಳಾಗಿವೆ. ಘಟನೆಯಿಂದ ಮಹಿಳೆಗೆ ಆಘಾತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದು ಕುಖ್ಯಾತ ಬ್ಲೇಡ್ ಬ್ಯಾಚ್ ಗ್ಯಾಂಗ್ ನ ಕೃತ್ಯ ಅಥವಾ ಗಾಂಜಾ ನಶೆಯಲ್ಲಿ ದುಷ್ಕರ್ಮಿಗಳು ಎಸಗಿರುವ ಕೃತ್ಯವಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.