ಕೆ.ಎನ್.ಪಿ.ವಾರ್ತೆ,ಕೋಲಾರ,ಆ.27;

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರೀಕರಣಕ್ಕೆ ವಿಘ್ನ ಎದುರಾಗಿದ್ದು, ಕೆಜಿಎಫ್ -1 ಮುಂದುವರೆದ ಭಾಗದ ಚಿತ್ರೀಕರಣಕ್ಕೆ ಜಿಲ್ಲೆಯ ಕೆಜಿಎಫ್ ಸಿವಿಲ್ ಕೋರ್ಟ್ ನಿಂದ ತಡೆಯಾಜ್ಞೆ ನೀಡಲಾಗಿದೆ.

ಕೆಜಿಎಫ್ ನಗರದ ಸೈನೈಡ್ ದಿಬ್ಬದ ಪ್ರದೇಶದಲ್ಲಿ ಯಶ್ ಅಭಿನಯದ ಕೆಜಿಎಫ್ 2 ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು ಚಿತ್ರದಲ್ಲಿ ಕೆಜಿಎಫ್ ಅನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಕೆಜಿಎಫ್ – 2 ಸಿನಿಮಾದ ಚಿತ್ರೀಕರಣಕ್ಕಾಗಿ ಕೆನಡಿಯಸ್ ಸೈನೈಡ್ ಗುಡ್ಡದ ಮೇಲೆ ದುಬಾರಿ ಸೆಟ್ ಹಾಕಲಾಗಿದ್ದು, ಚಿತ್ರೀಕರಣ ಭರದಿಂದ ಸಾಗಿದೆ. ಆದರೆ, ಸೆಟ್ ಹಾಕುವ ವೇಳೆ ಗಿಡ ಮರಗಳನ್ನು ಹಾನಿ ಮಾಡಲಾಗಿದ್ದು, ಸ್ಥಳೀಯರಿಗೆ ತೊಂದರೆ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಲಯ ಚಿತ್ರೀಕರಣಕ್ಕೆ ತಡೆಯಾಜ್ಞೆ ನೀಡಿದೆ.

ಎನ್ ಶ್ರೀನಿವಾಸ್ ಎಂಬುವವರು ಕೆಜಿಎಫ್ – 2 ಚಿತ್ರೀಕರಣದಿಂದ ಪರಿಸರದ ಮೇಲೆ ಹಾನಿಯಾಗುತ್ತಿದೆ ಎಂದು ಆರೋಪಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಕೆಜಿಎಫ್-2 ಚಿತ್ರೀಕರಣಕ್ಕೆ ತಡೆಯಾಜ್ಞೆ ನೀಡಿ, ನಿರ್ಮಾಪಕರಿಗೆ ನೋಟಿಸ್ ಜಾರಿ ಮಾಡಿದೆ.

ಈ ಮಧ್ಯೆ ನ್ಯಾಯಾಲಯದ ತಡೆಯಾಜ್ಞೆ ಬಗ್ಗೆ ಪ್ರತಿಕ್ರಿಯಿಸಿರುವ ಚಿತ್ರ ನಿರ್ಮಾಪಕ ವಿಜಯ್ ಕಿರಗಂದೂರು, ಆದೇಶ ನೋಡಿ ನ್ಯಾಯಾಲಯಕ್ಕೆ ಸೂಕ್ತ ಉತ್ತರ ನೀಡಲಾಗುವುದು. ಈಗಾಗಲೇ ಶೇಕಡಾ 60 ರಷ್ಟು ಚಿತ್ರೀಕರಣ ಮುಗಿದಿದ್ದು, ಈ ಹಿಂದೆ ಈ ರೀತಿಯ ತೊಂದರೆ ಆಗಿರಲಿಲ್ಲ ಎಂದು ತಿಳಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.