ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜ.19;

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ನಟ ಪ್ರಕಾಶ್ ರೈ, ಯಾವುದೇ ರಾಜಕೀಯ ಪಕ್ಷ ಸೇರ್ಪಡೆಯಾಗದೆ ಇರುವುದಕ್ಕೆ ಕಾರಣ ಬಹಿರಂಗಪಡಿಸಿದ್ದಾರೆ.

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ಮಾಡಿದ್ದಕ್ಕೆ ಕಾರಣ ನೀಡಿರುವ ಪ್ರಕಾಶ್‌ ರೈ, ರಾಜಕೀಯ ಪಕ್ಷವನ್ನು ಸೇರಿಕೊಂಡರೆ ಅಲ್ಲಿ ನಾನು ಮೂರು ತಿಂಗಳಿಗಿಂತ ಹೆಚ್ಚು ಕಾಲ ಇರಲಾರೆ. ಈ ಕಾರಣಕ್ಕಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿರುವುದಾಗಿ ಅವರು ತಿಳಿಸಿದ್ದಾರೆ.

ಇನ್ನು, ಕಳೆದ ವರ್ಷದ ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ತಾವು ರಾಜ್ಯವನ್ನು ಸುತ್ತಿದ್ದು, ಜನರ ಧ್ವನಿಯನ್ನು ಕೇಳಿಸಿಕೊಳ್ಳಬೇಕಾಗಿದೆ ಎಂಬ ನಿರ್ಧಾರಕ್ಕೆ ಬಂದಿದ್ದೆ. ಹೀಗಾಗಿ, ರಾಜಕೀಯ ಅಖಾಡಕ್ಕೆ ಧುಮುಕಲು ನಿರ್ಧರಿಸಿದೆ ಎಂದೂ ಬಹುಭಾಷಾ ನಟ ಹಾಗೂ ಜಸ್ಟ್ ಆ್ಯಸ್ಕಿಂಗ್ ಎಂದೇ ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿಗೊಳಗಾಗಿರುವ ಪ್ರಕಾಶ್‌ ರೈ ಹೇಳಿಕೊಂಡಿದ್ದಾರೆ.

ಅಲ್ಲದೆ, ಬೆಂಗಳೂರು ಕೇಂದ್ರ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಕಾರಣ ನೀಡಿರುವ ಅವರು, ‘ನಾನು ಸೇಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ಹುಟ್ಟಿದ್ದು. ಶಾಲೆ ಮತ್ತು ಕಾಲೇಜುಗಳಿಗೆ ಹೋಗಿದ್ದು ಇಲ್ಲಿ. ಬಳಿಕ ಗಾಂಧಿನಗರದಲ್ಲಿ ಸಿನಿಮಾ ಸೇರಿಕೊಂಡೆ. ನನ್ನ ಪಯಣ ಆರಂಭಿಸಿದ್ದು ಈ ಜಾಗದಿಂದ. ಹೀಗಾಗಿ ನನ್ನ ಬೇರುಗಳು ಇಲ್ಲಿಯೇ ಇವೆ. ಹೀಗಾಗಿಯೇ ನಾನು ಈ ಕ್ಷೇತ್ರವನ್ನು ಆಯ್ದುಕೊಂಡೆ’ ಎಂದು ರೈ ಹೇಳಿದ್ದಾರೆ.

ಜನವರಿ 20ರಿಂದ ಕ್ಷೇತ್ರದ ಎಲ್ಲ ಎಂಟು ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಾಗುವುದು. ಇನ್ನು ಹದಿನೈದು ದಿನಗಳಲ್ಲಿ ‘ಜನರ ಪ್ರಣಾಳಿಕೆ’ ಅಂತಿಮಗೊಳಿಸುವುದಾಗಿ ಪ್ರಕಾಶ್‌ ರೈ ಮಾಹಿತಿ ನೀಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.