ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.10;

ಎರಡು ಕಟ್ಟಡಗಳು ಕುಸಿದು ಒಬ್ಬ ದುರ್ಮರಣವನ್ನಪ್ಪಿದ ಘಟನೆ ಪುಲಕೇಶಿ ನಗರದ ಕುಕ್‌ಟೌನ್‌ನಲ್ಲಿ ನಡೆದಿದೆ. ಅವಶೇಷಗಳಡಿ ಸಿಲುಕಿ ಕಾರ್ಮಿಕ ಶಂಭು ಕುಮಾರ್ ಎನ್ನುವವರು ಮೃತಪಟ್ಟಿದ್ದಾರೆ.

3 ಮಹಡಿಯ ನಿರ್ಮಾಣ ಹಂತದ ಕಟ್ಟಡ ಕುಸಿತವಾಗಿ, ಪಕ್ಕದಲ್ಲಿದ್ದ 4 ಮಹಡಿಯ ನಿರ್ಮಾಣ ಹಂತದ ಕಟ್ಟಡದ ಬೇಸ್‌ಮೆಂಟ್‌ ಕುಸಿತವಾಗಿದೆ. ತಡರಾತ್ರಿ 2.15 ರ ಸುಮಾರಿಗೆ ದುರ್ಘಟನೆ ನಡೆದಿದ್ದು, ಸಂತೋಷ, ಉಮೇಶ್ ಕುಮಾರ್, ಉತ್ತಪ್ಪ ಮಡಕ್ ಸೇರಿ 9 ಜನರನ್ನು ರಕ್ಷಿಸಲಾಗಿದೆ. ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿಶಾಮಕ ದಳ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.