ಕೆ.ಎನ್.ಪಿ.ವಾರ್ತೆ,ರಾಂಚಿ,ಜೂ.21;

ಯೋಗವನ್ನು ಗ್ರಾಮೀಣ ಪ್ರದೇಶಕ್ಕೆ ಪರಿಚಯಿಸಬೇಕಾದ ಸಮಯವಿದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

5ನೇ ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನಲೆಯಲ್ಲಿ ಜಾರ್ಖಂಡ್ ರಾಜಧಾನಿ ರಾಂಚಿಯ ಪ್ರಭಾತ್ ತಾರಾ ಮೈದಾನದಲ್ಲಿ ಯೋಗಾಭ್ಯಾಸ ಮಾಡಿದ ಬಳಿಕ ಅವರು ಮಾತನಾಡಿದರು.

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಸಂದರ್ಭದಲ್ಲಿ ಭಾರತ ಸೇರಿದಂತೆ ವಿಶ್ವದ ಜನರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಇಂದು ನಾನು ಆಧುನಿಕ ಯೋಗದ ಪ್ರಯಾಣವನ್ನು ನಗರ ಪ್ರದೇಶಗಳಿಂದ ಹಳ್ಳಿಗಳಿಗೆ ಬಡ ಮತ್ತು ಬುಡಕಟ್ಟು ಜನಾಂಗದವರ ಮನೆಗಳಿಗೆ ಕೊಂಡೊಯ್ಯಬೇಕಾಗಿದೆ.

ಯೋಗ ಕೇವಲ ನಗರ ಪ್ರದೇಶಗಳ ಶ್ರೀಮಂತರ ದಿನಚರಿಯಾಗಿರದೆ, ಹಳ್ಳಿಗಳ ಬಡ ಜನರ ಜೀವನದ ಭಾಗವು ಕೂಡ ಆಗಬೇಕಿದೆ. ಅನಾರೋಗ್ಯದಿಂದ ಹೆಚ್ಚು ನೋವು ಅನುಭವಿಸುವವರು, ಕಷ್ಟಪಡುವವರು ಬಡಜನರು, ಅಂತವರು ಯೋಗಾಭ್ಯಾಸದಲ್ಲಿ ನಿರತರಾಗಬೇಕು. ಯೋಗದಿಂದ ಸದೃಢ ಮಾನಸಿಕ ಮತ್ತು ದೈಹಿಕ ಆರೋಗ್ಯ ಹೊಂದಲು ಸಾಧ್ಯ. ಅದು ಯೋಗ ಮತ್ತು ಭಾರತದ ತತ್ವಶಾಸ್ತ್ರದ ಶಕ್ತಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ರಘುವೀರ್ ದಾಸ್ ಮತ್ತು ಹಲವು ಸಚಿವರುಗಳು ಸೇರಿದಂತೆ ಸುಮಾರು 30 ಸಾವಿರ ಜನ ಭಾಗವಹಿಸಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.